ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕಿನಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ.
ಜೈವಿಕ ಇಂಧನ ಉದ್ಯಾನವನ ಯೋಜನೆಯಡಿ ಕೃಷಿ ಅರಣ್ಯ ವಿಭಾಗದಲ್ಲಿ ವೈಜ್ಞಾನಿಕ ಸಹಾಯಕ (ಸೈಂಟಿಫಿಕ್ ಅಸಿಸ್ಟಂಟ್) ತಾತ್ಕಾಲಿಕ ಹುದ್ದೆಗಾಗಿ ಫೆಬ್ರವರಿ 15 ರಂದು ಬೆಳಿಗ್ಗೆ 10:30 ಘಂಟೆಗೆ ಸಂದರ್ಶನ ಏರ್ಪಡಿಸಲಾಗಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾನೂನು ನೆರವು ರಕ್ಷಣಾ ಸಲಹೆಗಾರ (LADC) ಕಚೇರಿಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ತಿಳಿಸಿದ್ದಾರೆ.
ಸಾರಿಗೆ ಸಂಸ್ಥೆಗಳಲ್ಲಿ ಕಳೆದ 8 ವರುಷಗಳಿಂದ ಅಂದರೆ 2016 ರಲ್ಲಿನ ನೇಮಕಾತಿ ನಂತರ ಯಾವುದೇ ನೇಮಕಾತಿ ಆಗಿರಲಿಲ್ಲ. ಈ ಸಂಬಂಧ 4 ಸಾರಿಗೆ ಸಂಸ್ಥೆಗಳಲ್ಲಿ 2016 ರಿಂದ ಇಲ್ಲಿಯವರೆಗೆ ಸಿಬ್ಬಂದಿಗಳ ನಿವೃತ್ತಿ ಹಾಗೂ ಇತರೆ ಕಾರಣಗಳಿಂದ 13669
ಭಾರತೀಯ ಸೇನೆಯು ಜೆಸಿಒ/ಒಆರ್ ನೇಮಕಾತಿ ಪ್ರಕ್ರಿಯೆಯಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ಪ್ರಕಟಿಸಿದೆ. ಮೊದಲ ಹಂತದಲ್ಲಿ, joinindianarmy.nic.in ವೆಬ್ಸೈಟ್ ನಲ್ಲಿ ಆನ್ಲೈನ್ನಲ್ಲಿ ನೋಂದಾಯಿಸಿದ ಮತ್ತು ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆಗೆ ಒಳಗಾಗುತ್ತಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಖಾಲಿ ಇರುವ 9 ಹುದ್ದೆಗಳಿಗೆ ಅರ್ಹ ಶಿಕ್ಷಣ ಪಡೆದ ಆರೋಗ್ಯ ನಿರೀಕ್ಷಕರನ್ನು ನೇರ ಸಂದರ್ಶನದ ಮೂಲಕ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡದ ಕೃಷಿ ವಿಶ್ವವಿದ್ಯಾಲಯ ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲಿ, ಇಬ್ಬರು “ಸಹಾಯಕ ಪ್ರಾಧ್ಯಾಪಕರು” ತಾತ್ಕಾಲಿಕ ಹುದ್ದೆಗಾಗಿ ಸಂಖ್ಯಾಶಾಸ್ತ್ರ ವಿಷಯದಲ್ಲಿ ಸ್ನಾತಕೋತರ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯದ ಯುವಜನರಿಗೆ ಸೂಕ್ತ ಉದ್ಯೋಗಾವಕಾಶಗಳು ಸಿಗುವಂತಾಗಬೇಕು ಎನ್ನುವ ಗುರಿಯೊಂದಿಗೆ ಈವರಗೆ 10 ಲಕ್ಷಕ್ಕೂ ಹೆಚ್ಚು ಯುವಜನರಿಗೆ ಕೌಶಲ್ಯ ತರಬೇತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಶುಕ್ರವಾರ ಹೇಳಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಮಾತೃವಂದನ ಯೋಜನೆಯಡಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ(ಮುನಿಸಿಪಾಲಿಟಿ) ಯೋಜನೆ(ಹಂತ-4)ಯನ್ನು ಅನುಷ್ಠಾನಗೊಳಿಸುವ ಕುರಿತು ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ(ರಿ) ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ 10 ದಿನಗಳ ಫಾಸ್ಟ್ ಫುಡ್, 13 ದಿನಗಳ ಸಿಸಿ ಟಿವಿ ಕ್ಯಾಮರ ದುರಸ್ತಿ ಹಾಗೂ 30 ದಿನಗಳ ಕಂಪ್ಯೂಟರ್ ಟ್ಯಾಲಿಯ ಉಚಿತ ತರಬೇತಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ 2022ರ ಜೂನ್ 3 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.