ಚಾಮರಾಜನಗದಲ್ಲಿಂದು ರಾಹುಲ್ ಗಾಂಧಿ ಭರ್ಜರಿ ಪ್ರಚಾರ. ಒಂದೇ ದಿನ.. ನಾಲ್ಕು ಕ್ಷೇತ್ರ.. ರಾಹುಲ್ ಗಾಂಧಿ ಮತಶಿಕಾರಿ. ರಾಹುಲ್ ಗಾಂಧಿಗೆ ಮಲ್ಲಿಕಾರ್ಜುನ್ ಖರ್ಗೆ.. ಸ್ಥಳೀಯರ ಸಾಥ್. ಬೆಳಗ್ಗೆ ಹನೂರು.. ಮಧ್ಯಾಹ್ನ ಕೊಳ್ಳೇಗಾಲ.. ಚಾಮರಾಜನಗರ, ಸಂಜೆ 6 ಗಂಟೆಗೆ ಗುಂಡ್ಲುಪೇಟೆಯಲ್ಲಿ ರಾಹುಲ್ ಮತಯಾಚನೆ. ಪ್ರಚಾರದ ಜೊತೆ ಚಾಮರಾಜನಗರದಲ್ಲಿ ರಾಹುಲ್ ಸಮಾವೇಶ.
ಬಿಜೆಪಿ ಪಕ್ಷದ ಆಡಳಿತ ಅಂದ್ರೆ ಕಮಿಷನ್ ಸರ್ಕಾರದ ಆಡಳಿತ. 40% ಕಮಿಷನ್ ಕೊಟ್ರೆ ಕೆಲಸ ಆಗುತ್ತೆ.. ಇಲ್ಲ ಅಂದ್ರೆ ಇಲ್ಲ. ಕಡಪಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಧಾರವಾಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ.
ಎರಡು ಅಭ್ಯರ್ಥಿಗಳ ಬದಲಾವಣೆಗೆ ಕಾಂಗ್ರೆಸ್ ಚಿಂತನೆ. ಶಿಕಾರಿಪುರ, ಮುಳಬಾಗಿಲು ಬದಲಾವಣೆ ಸಾಧ್ಯತೆ. ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್. ಸಭೆಯಲ್ಲಿ ಡಿ.ಕೆ.ಶಿವಕುಮಾರ್, ಸುರ್ಜೇವಾಲ ಉಪಸ್ಥಿತಿ. ಪದ್ಮನಾಭ ನಗರ ಅಭ್ಯರ್ಥಿ ಬದಲಾದ್ರೂ ಅಚ್ಚರಿಯಿಲ್ಲ. ಈ ಕುರಿತು ನಡೆದಿದೆ ಹೈವೋಲ್ಟೇಜ್ ಮೀಟಿಂಗ್.
ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿರೋದು ಹೆಮ್ಮೆಯ ವಿಚಾರ. ಇದು ರಾಜ್ಯ ಕಾಂಗ್ರೆಸ್ ಗೆ ಶಕ್ತಿಯನ್ನು ತಂದುಕೊಟ್ಟಿದೆ. 2023ರಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಖರ್ಗೆಯವರು ನೀಡಿರುವ ಎಚ್ಚರಿಕೆ ಮಾತುಗಳಂತೆ ನಾವು ನಡೆದುಕೊಳ್ತೇವೆ ಎಂಬುದನ್ನು ಹೇಳಲು ಬಯಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯನವರು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ಜಾತಿ ಧರ್ಮದವರನ್ನು ಅಧ್ಯಕ್ಷರನ್ನಾಗಿ ಮಾಡಿದೆ.ಹೀಗಾಗಿ ಬಿಜೆಪಿ, ಖಾಕಿ ಚಡ್ಡಿ ಹಾಗೂ ಕರಿ ಟೋಪಿ ಅವರಿಂದ ಆಂತರಿಕ ಪ್ರಜಾಪ್ರಭುತ್ವದ ನಾವು ಕಲಿಯುವ ಅಗತ್ಯವಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿಗೆ ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಿಂದ 200ಕ್ಕೂ ಹೆಚ್ಚು ಬಸ್ಗಳನ್ನು ನಿಯೋಜಿಸಲಾಗಿದ್ದು, ಜಿಲ್ಲೆಯಿಂದ 15 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಅಂತ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆಎನ್ ಕೇಶವರೆಡ್ಡಿ ತಿಳಿಸಿದ್ದಾರೆ.
ಇಂದು ಕಾಂಗ್ರೆಸ್ ಹೊಸ ಅಧ್ಯಕ್ಷರ ಚುನಾವಣೆ ಫಲಿತಾಂಶ ಹೊರ ಬೀಳಲಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ 10ಗಂಟೆಗೆ ಎಣಿಕೆ ಆರಂಭ ಆಗಲಿದೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಸ್ಪರ್ಧೆ ಇದ್ದು ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಬಹುತೇಕ ಖಚಿತ ಎನ್ನಲಾಗ್ತಿದೆ.
ಸುಮಾರು 22 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಎದುರಾಗಿದೆ. ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಅಧ್ಯಕ್ಷ ಸ್ಥಾನದ ರೇಸ್ನಲ್ಲಿದ್ದಾರೆ.
ಶುಕ್ರವಾರದಂದು ಕಾಂಗ್ರೆಸ್ನ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಮಲ್ಲಿಕಾರ್ಜುನ ಖರ್ಗೆ ಒಂದು ವೇಳೆ ಅಧ್ಯಕ್ಷರಾಗಿ ಆಯ್ಕೆಯಾದರೆ ಎಸ್.ನಿಜಲಿಂಗಪ್ಪ ನಂತರ ಕರ್ನಾಟಕದಿಂದ ಆಯ್ಕೆಯಾಗುವ ಎರಡನೇ ಎಐಸಿಸಿ ಅಧ್ಯಕ್ಷರಾಗಲಿದ್ದಾರೆ.
ಸಿದ್ದರಾಮಯ್ಯನವ್ರು ಅಹಿಂದಾ ಅಹಿಂದಾ ಅಂತಾ ಹೇಳಿ ಓಡಾಡ್ತಿದ್ದಾರೆ.. ಆದ್ರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಯಾಕೆ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ. ದಲಿತರ ಅಲ್ಪಸಂಖ್ಯಾತರ ಹೆಸರಿನಲ್ಲಿ ಅಧಿಕಾರ ಅನುಭವಿಸಿದ್ದಾರೆ ಎಂದು ಕಾರಜೋಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಭಷ್ಟ್ರಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರಿಗೆ ಸಂಕಷ್ಟ ಎದುರಾಗಿದ್ದು, ಇಂದು ಇಡಿ ಮಲ್ಲಿಕಾರ್ಜುನ ಖರ್ಗೆಯವರನ್ನು ವಿಚಾರಣೆಗೆ ಒಳಪಡಿಸಿದೆ.
ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿದ ಯಡಿಯೂರಪ್ಪ, ಅಂಬೇಡ್ಕರ್ ಅವರ 129 ನೇ ಜಯಂತಿಯನ್ನು ದೇಶದೆಲ್ಲೆಡೆ ಆಚರಿಸುತ್ತಿದ್ದೇವೆ. ಅಂಬೇಡ್ಕರ್ ಶ್ರೇಷ್ಠ ಆರ್ಥಿಕ ತಜ್ಞ, ಸಂವಿಧಾನ ತಜ್ಞ ಮತ್ತು ರಾಜಕೀಯ ಚಿಂತಕ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.