ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸುವ ವಿಚಾರವಾಗಿ ನೀಡಿದ್ದ ಭರವಸೆಯನ್ನು ಬಿಜೆಪಿ ಸರ್ಕಾರ ಪೂರ್ಣಗೊಳಿಸದಿರುವುದಕ್ಕೆ ಭಾನುವಾರದಂದು ಆರ್ಎಸ್ಎಸ್ ನಾಯಕ ಸುರೇಶ್ ಭೈಯಾಜಿ ಜೋಶಿ ವಾಗ್ದಾಳಿ ನಡೆಸಿದರು. ಒಂದು ವೇಳೆ ಮಂದಿರ ನಿರ್ಮಾಣಕ್ಕೆ ಶಾಸನದ ಅಗತ್ಯ ಬಿದ್ದರೆ ಕೇಂದ್ರ ಸರ್ಕಾರ ಜಾರಿಗೆ ತರಬೇಕೆಂದು ಅವರು ಒತ್ತಾಯಿಸಿದರು.
ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಬಿಜೆಪಿ ಚಿಂತಿಸಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವರ್ಗಿಯಾ ತಿಳಿಸಿದ್ದಾರೆ.
ರಾಮಮಂದಿರದ ನಿರ್ಮಾಣವನ್ನು ಪ್ರಯಾಗರಾಜ್ ನಲ್ಲಿ ನಡೆಯಲಿರುವ ಕುಂಭದ ಸಂದರ್ಭದಲ್ಲಿ ನಿರ್ಧರಿಸಲಾಗುವುದು ಎಂದು ವಿಶ್ವ ಹಿಂದು ಪರಿಷತ್ ಆಯೋಜಿಸಿದ್ದ ಧರ್ಮ ಸಭಾದಲ್ಲಿ ನಿರ್ಮೊಯಿ ಅಖಾರಾದ ರಾಮಜೀ ದಾಸ್ ತಿಳಿಸಿದ್ದಾರೆ.
ಅಯೋಧ್ಯಾ ಭೂವಿವಾದ ಪ್ರಕರಣದಲ್ಲಿ ಒಂದು ವೇಳೆ ರಾಮಮಂದಿರವನ್ನು ನಿರ್ಮಿಸಲು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೆ ಅದಕ್ಕೆ ತಮ್ಮದು ಯಾವುದೇ ರೀತಿಯ ಆಕ್ಷೇಪವಿಲ್ಲ ಎಂದು ಭೂವಿವಾದದಲ್ಲಿ ಅರ್ಜಿದಾರರಲ್ಲೋಬ್ಬರಾದ ಇಕ್ಬಾಲ್ ಅನ್ಸಾರಿ ತಿಳಿಸಿದರು.
ದೇವರು ಸಂವಿಧಾನಕ್ಕಿಂತ ದೊಡ್ಡವನು ಆದ್ದರಿಂದ ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಯಾವುದೇ ವಿಳಂಬವಿಲ್ಲ ಎಂದು ಬಲ್ಲಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿದರು.
ಅಯೋಧ್ಯೆ ವಿವಾದ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಬಿಜೆಪಿ ಸಂಸದ ಮತ್ತು ರಾಮ ಜನ್ಮಭೂಮಿ ನ್ಯಾಸ್ ನ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿ ಶನಿವಾರದಂದು ರಾಮಮಂದಿರ ನಿರ್ಮಾಣ ಕಾರ್ಯದ ಬಗ್ಗೆ ಘೋಷಣೆ ಹೊರಡಿಸಿದ್ದಾರೆ.
ರಾಮಮಂದಿರ-ಬಾಬರಿ ಮಸೀದಿ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದ ನಂತರ, ರಾಮ ಮಂದಿರ ನಿರ್ಮಾಣಕ್ಕಾಗಿ ಸರಕಾರ ಭೂಮಿಯನ್ನು ಸ್ವಾಧೀನಪಡಿಸಬೇಕೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಹೇಳಿದೆ.
ಸುಪ್ರೀಂಕೋರ್ಟ್ ರಾಮಮಂದಿರ ವಿಚಾರಣೆಯನ್ನು ಮುಂದೂಡಿರುವುದಕ್ಕೆ ಪ್ರತಿಕ್ರಿಯಿಸಿರುವ ನಾವು ಕಾನೂನನ್ನು ತಿದ್ದುಪಡಿ ಮಾಡುತ್ತೇವೆ, ಏಕೆಂದರೆ ಸುಪ್ರೀಂಕೋರ್ಟ್ ಸಂಸತ್ತಿಗಿಂತ ಮೇಲಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣ್ಯ ಸ್ವಾಮಿ ತಿಳಿಸಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ದಾಳಿ ನಡೆಸಿದ ಶಿವಸೇನೆ "ಒಂದು ವೇಳೆ ಬಿಜೆಪಿ ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸಲು ವಿಫಲವಾದರೆ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯಲಾಗುತ್ತದೆ "ಎಂದು ಶಿವಸೇನಾ ತನ್ನ ಮುಖವಾಣಿ ಸಾಮ್ನಾದಲ್ಲಿ ಎಚ್ಚರಿಕೆ ನೀಡಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನು ಬಹಿರಂಗವಾಗಿ ಯಾರು ವಿರೋಧಿಸುತ್ತಿಲ್ಲ ಬಹುತೇಕರು ರಾಮನನ್ನು ಆರಾಧಿಸುತ್ತಾರೆ ಎಂದು ತಿಳಿಸಿದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.