ಮಮತಾ ಬ್ಯಾನರ್ಜಿಯವರು ಪ್ರಧಾನಿಯಾದರೆ ಎಂದು ಮಾತು ಆರಂಭಿಸಿ ಮುಂದಿನ ಹೇಳಿಕೆ ನೀಡಿದ್ದೆ ಅಷ್ಟೇ. ಆದರೆ, ಮಮತಾ ಪ್ರಧಾನಿಯಾಗುವ ಸಾಧ್ಯತೆಯೇ ಇಲ್ಲ. ಇದನ್ನೆಲ್ಲಾ ಹಾಸ್ಯವಾಗಿ ಪರಿಗಣಿಸಬೇಕು ಎಂದು ದಿಲೀಪ್ ಘೋಷ್ ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ಬಂಗಾಳದಿಂದ ಮೊದಲ ರಾಷ್ಟ್ರಪತಿಯಾಗಿ ಪ್ರಣಬ್ ಮುಖರ್ಜಿ ಆಯ್ಕೆಯಾಗಿದ್ದರು. ಈಗ ಪ್ರಧಾನ ಮಂತ್ರಿ ಸರದಿ... ಹಾಗಾಗಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿಯಾಗುವ ಎಲ್ಲಾ ಸಾಧ್ಯತೆ ಇದೆ" ಎಂದು ದಿಲೀಪ್ ಘೋಷ್ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಸದಾ ಆಕ್ಟೀವ್ ಆಗಿರಲು, ದೇಹದ ಫಿಟ್ ನೆಸ್ ಕಾಪಾಡಿಕೊಳ್ಳಲು ಪ್ರತಿನಿತ್ಯ ಬ್ಯಾಡ್ಮಿಂಟನ್ ಆಡ್ತಾರಂತೆ. ಹೀಗಂತ ಮಮತಾ ಬ್ಯಾನರ್ಜಿ ಅವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
'ಏಕ್ ದಿನ್ ಅಚಾನಕ್', 'ಪದಾತಿಕ್', 'ಮೃಗಯಾ', 'ರಾತ್ಭೋರ್'ನಂತಹ ಪ್ರಸಿದ್ಧ ಚಿತ್ರಗಳನ್ನು ನೀಡಿದ್ದ ಸೇನ್ ಅವರಿಗೆ 2003 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
ಪಶ್ಚಿಮ ಬಂಗಾಳದಲ್ಲಿ ರಥಯಾತ್ರೆಗೆ ಕೊಲ್ಕತ್ತಾ ಹೈಕೋರ್ಟ್ ಅನುಮತಿ ನೀಡದ ಕಾರಣ, ಅನುಮತಿ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿ ಅರ್ಜಿಯ ಶೀಘ್ರ ವಿಚಾರಣೆ ಮಾಡುವಂತೆ ಬಿಜೆಪಿ ಮನವಿ ಮಾಡಿತ್ತು.
ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಬಿಜೆಪಿ ರ್ಯಾಲಿ ನಂತರ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗಂಗಾ ಜಲ ಸಿಂಪಡಿಸುವ ಮೂಲಕ ಮೈದಾನವನ್ನು ಶುದ್ಧೀಕರಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಕಲ್ಕತ್ತಾ ಹೈಕೋರ್ಟ್ ಗುರುವಾರದಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಥ ಯಾತ್ರೆಗೆ ನಿರಾಕರಿಸಿದೆ.ಈ ಯಾತ್ರೆ ರಾಜ್ಯದಲ್ಲಿ ಕೋಮುಗಲಭೆಗೆ ಕಾರಣವಾಗಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಪಶ್ಚಿಮ ಬಂಗಾಳವನ್ನು "ಬಾಂಗ್ಲಾ" ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ವಿಳಂಬಮಾಡುತ್ತಿರುವ ಕ್ರಮಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ದಕ್ಷಿಣ ಕೊಲ್ಕತ್ತಾದ ಮಜೆರಹಾತ್ ನಲ್ಲಿ ಫ್ಲೈಓವರ್ ಕುಸಿದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.ವರದಿಗಳ ಪ್ರಕಾರ ಐವರು ಅವಶೇಷಗಳಡಿ ಸಿಕ್ಕು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.