ಚಂದ್ರಯಾನ-3 ಲ್ಯಾಂಡಿಂಗ್‌ನ ಕ್ಷಣ ಕ್ಷಣದ ಅಪ್ಡೇಟ್, ಮೊಬೈಲ್‌ನಲ್ಲಿ ಲೈವ್ ಸ್ಟ್ರೀಮಿಂಗ್ !

Chandrayaan-3 Latest Updates:ಆಗಸ್ಟ್ 23 ರಂದು ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ. ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಪ್ರತಿಯೊಬ್ಬರೂ ಕಾತುರದಿಂದ ಕಾಯುತ್ತಿದ್ದಾರೆ.   

Written by - Ranjitha R K | Last Updated : Aug 22, 2023, 03:33 PM IST
  • ಚಂದ್ರಯಾನ-3 ಚಂದ್ರನ ಮೇಲೆ ಇಳಿಯಲು ಕ್ಷಣಗಣನೆ
  • ಸಂಜೆ 6:40 ಕ್ಕೆ ಚಂದ್ರನ ಮೇಲೈಯಲ್ಲಿ ಲ್ಯಾಂಡ್ ಆಗಲಿರುವ ಚಂದ್ರಯಾನ-3
  • ಈ ಐತಿಹಾಸಿಕ ಕ್ಷಣವನ್ನು ಮೊಬೈಲ್‌ನಲ್ಲಿ ವೀಕ್ಷಿಸಬಹುದು.
ಚಂದ್ರಯಾನ-3 ಲ್ಯಾಂಡಿಂಗ್‌ನ ಕ್ಷಣ ಕ್ಷಣದ ಅಪ್ಡೇಟ್, ಮೊಬೈಲ್‌ನಲ್ಲಿ ಲೈವ್ ಸ್ಟ್ರೀಮಿಂಗ್ ! title=

Chandrayaan-3 Latest Updates : ಚಂದ್ರಯಾನ-3 ಚಂದ್ರನ ಮೇಲೆ ಇಳಿಯಲು ಕ್ಷಣಗಣನೆ ಆರಂಭವಾಗಿದೆ. ಪ್ರಸ್ತುತ, ಚಂದ್ರಯಾನ-3 ಚಂದ್ರನಿಂದ ಕನಿಷ್ಠ 25 ಕಿಲೋಮೀಟರ್ ದೂರದಲ್ಲಿ ಸುತ್ತುತ್ತಿದೆ. ಚಂದ್ರಯಾನ-3 ಆಗಸ್ಟ್ 23 ರಂದು ಸಂಜೆ 6:40 ಕ್ಕೆ ಚಂದ್ರನ  ಮೇಲೈಯಲ್ಲಿ ಲ್ಯಾಂಡ್ ಆಗಲಿದೆ. ಈ ಮೂಲಕ, ಇತಿಹಾಸ ಸೃಷ್ಟಿಯಾಗಲಿದೆ. ಆಗಸ್ಟ್ 23 ರಂದು ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ. ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಪ್ರತಿಯೊಬ್ಬರೂ ಕಾತುರದಿಂದ ಕಾಯುತ್ತಿದ್ದಾರೆ. ಈ ಬಾರಿ ದೊಡ್ಡ ಯಶಸ್ಸು ಸಿಗುವುದು ಖಚಿತ ಎನ್ನುವ ಭರವಸೆ ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್ ಅವರದ್ದು.  ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ಅನ್ನು ಸಾಫ್ಟ್ ಲ್ಯಾಂಡ್ ಮಾಡುವ  ವಿಶ್ವದ ಮೊದಲ ದೇಶ ಎಂಬ ಹೆಗ್ಗಳಿಕೆ ಪಾತ್ರವಾಗುವ  ಸುವರ್ಣಾವಕಾಶವಿದೆ. ಈ ಐತಿಹಾಸಿಕ ಕ್ಷಣವನ್ನು ಮೊಬೈಲ್‌ನಲ್ಲಿ ವೀಕ್ಷಿಸಬಹುದು.

ಮೊಬೈಲ್ ನಲ್ಲಿ ಲೈವ್ ಸ್ಟ್ರೀಮಿಂಗ್ ನೋಡುವುದು ಹೇಗೆ? : 
ಚಂದ್ರಯಾನ-3 ಆಗಸ್ಟ್ 23, 2023 ರಂದು  ಸಂಜೆ 6 ಗಂಟೆ 4 ನಿಮಿಷಕ್ಕೆ   ಚಂದ್ರನ ಮೇಲೆ ಇಳಿಯಲಿದೆ. ಇದನ್ನು ಇಸ್ರೋದ ಅಧಿಕೃತ ವೆಬ್‌ಸೈಟ್, ಅಧಿಕೃತ ಯೂಟ್ಯೂಬ್ ಚಾನೆಲ್ ಮತ್ತು ಅಧಿಕೃತ ಫೇಸ್‌ಬುಕ್ ಪುಟದಲ್ಲಿ ನೇರವಾಗಿ ವೀಕ್ಷಿಸಬಹುದು. ಇದಲ್ಲದೇ, ಝೀ ನ್ಯೂಸ್ ವೆಬ್‌ಸೈಟ್‌ನಲ್ಲಿ ಕೂಡಾ ಚಂದ್ರಯಾನ-3 ಲ್ಯಾಂಡಿಂಗ್‌ನ ಲೈವ್ ಅಪ್‌ಡೇಟ್ ಅನ್ನು ನೋಡಬಹುದು.

ಇದನ್ನೂ ಓದಿ : ನೀವು ಫೋನ್ ಕವರ್‌ನಲ್ಲಿ ನೋಟ್ ಇಡ್ತೀರಾ? ಹಾಗಿದ್ರೆ ಈ ಸುದ್ದಿ ತಪ್ಪದೇ ಓದಿ

ಫೋಟೋ ಬಿಡುಗಡೆ ಮಾಡಿದ ಇಸ್ರೋ : 
ಚಂದ್ರಯಾನ-3 ಇದುವರೆಗೆ ಕಾರ್ಯನಿರ್ವಹಿಸುತ್ತಿರುವ ಆಧಾರದಲ್ಲಿ ಈ ಬಾರಿ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಲಿದೆ ಎನ್ನುವುದು ಇಸ್ರೋ ವಿಜ್ಞಾನಿಗಳ ದೃಢ ನಂಬಿಕೆ. ಏಕೆಂದರೆ ಚಂದ್ರಯಾನದ ವಿಕ್ರಮ್ ಲ್ಯಾಂಡರ್ ಚಂದ್ರನ ಸುತ್ತಲೂ ಹೋಗಿ ಅದರ ಹೊಸ ಪೋಟೋಗಳನ್ನು ತೆಗೆದುಕೊಳ್ಳುತ್ತದೆ. ಇಸ್ರೋ ಕೂಡಾ ಲ್ಯಾಂಡರ್‌ನಿಂದ ತೆಗೆದ ಹಲವು ಹೊಸ ಚಿತ್ರಗಳನ್ನು ಬಿಡುಗಡೆ ಮಾಡಿದೆ. 

 

ಇದನ್ನೂ ಓದಿ : ಫೋನ್‌ನಲ್ಲಿ ಇಂಟರ್ನೆಟ್ ಸರಿಯಾಗಿ ಕೆಲಸ ಮಾಡ್ತೀಲ್ವಾ? ಜಸ್ಟ್ ಈ ಟಿಪ್ಸ್ ಅನುಸರಿಸಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News