Viral Video: ಕಾರಿನಲ್ಲಿ ಮತ್ತೊಬ್ಬ ವ್ಯಕ್ತಿಯೊಂದಿಗಿದ್ದ ಪತ್ನಿ, ಬ್ಯಾಟ್‌ನಿಂದ ಥಳಿಸಿದ ಪತಿ..! 

Panchkula VIRAL VIDEO: ಈ ಘಟನೆಯನ್ನು ಸ್ಥಳೀಯರು ತಮ್ಮ ಮೊಬೈಲ್​ ಫೋನಿನಲ್ಲಿ ಚಿತ್ರೀಕಿಸಿದ್ದು, ​​​ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Written by - Puttaraj K Alur | Last Updated : Apr 17, 2024, 04:00 PM IST
  • ಪರಪುರುಷನೊಂದಿಗೆ ಕಾರಿನಲ್ಲಿ ಸುತ್ತಾಡುತ್ತಿದ್ದ ಪತ್ನಿಗೆ ಪಾಠ ಕಲಿಸಿದ ಪತಿ
  • ಬೇಸ್‌ಬಾಲ್‌ ಬ್ಯಾಟ್‌ನಿಂದ ನಡುರಸ್ತೆಯಲ್ಲಿಯೇ ಪತ್ನಿಗೆ ಮನಬಂದಂತೆ ಥಳಿತ
  • ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿರುವ ವಿಡಿಯೋ
Viral Video: ಕಾರಿನಲ್ಲಿ ಮತ್ತೊಬ್ಬ ವ್ಯಕ್ತಿಯೊಂದಿಗಿದ್ದ ಪತ್ನಿ, ಬ್ಯಾಟ್‌ನಿಂದ ಥಳಿಸಿದ ಪತಿ..!  title=
ಬ್ಯಾಟ್‌ನಿಂದ ಪತ್ನಿಗೆ ಥಳಿಸಿದ ಪತಿ!

ನವದೆಹಲಿ: ಕಾರಿನಲ್ಲಿ ಮತ್ತೊಬ್ಬ ವ್ಯಕ್ತಿಯೊಂದಿಗೆ ತಿರುಗಾಡುತ್ತಿರುವುದನ್ನು ಕಂಡು ಪತಿಯೊಬ್ಬ ನಡು ರಸ್ತೆಯಲ್ಲಿಯೇ ಪತ್ನಿಗೆ ಮನಬಂದಂತೆ ಥಳಿಸಿದ್ದಾನೆ. ಹರಿಯಾಣದ ಪಂಚಕುಲದಲ್ಲಿ ಈ ಘಟನೆ ನಡೆದಿದೆ. ಪರಪುರುಷನೊಂದಿಗೆ ಲವ್ವಿಡವ್ವಿ ನಡೆಸುತ್ತಿದ್ದ ಪತ್ನಿಗೆ ನಡುರಸ್ತೆಯಲ್ಲಿಯೇ ಬ್ಯಾಟ್‌ನಿಂದ ಪತಿ ಥಳಿಸಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. 

ಪಂಚಕುಲದ ಸೆಕ್ಟರ್ 26ರ ಉದ್ಯಾನವನದ ಬಳಿ ತನ್ನ ಪತ್ನಿ ಪರಪುರುಷನೊಂದಿಗೆ ಕಾರಿನಲ್ಲಿ ಒಟ್ಟಿಗೆ ಇರುವುದನ್ನು ಕಂಡ ಪತಿಗೆ ಕಡುಕೋಪ ಬಂದಿದೆ. ನೇರವಾಗಿಯೇ ಬಂದ ಆತ ಬ್ಯಾಟಿನಿಂದ ಕಾರಿನ ಗಾಜನ್ನು ಹೊಡೆದಿದ್ದಾನೆ. ಬಳಿಕ ಕಾರಿನಿಂದ ಪತ್ನಿಯನ್ನು ಹೊರಗೆ ಎಳೆದು ನಡುರಸ್ತೆಯಲ್ಲೇ ಜನರ ಮುಂದೆ ಮನಬಂದಂತೆ ಥಳಿಸಿದ್ದಾನೆ. 

ಇದನ್ನೂ ಓದಿ: ಮೋದಿ ಅಲೆ ಇದೆ ಎಂಬ ಭ್ರಮೆಗೆ ಒಳಗಾಗಬಾರದು ಎಂದ ಬಿಜೆಪಿ ಅಭ್ಯರ್ಥಿ..!

ಈ ಘಟನೆಯನ್ನು ಸ್ಥಳೀಯರು ತಮ್ಮ ಮೊಬೈಲ್​ ಫೋನಿನಲ್ಲಿ ಚಿತ್ರೀಕಿಸಿದ್ದು, ​​​ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪತ್ನಿಯ ದೂರಿನ ಆಧಾರದ ಮೇಲೆ ಪಂಚಕುಲದ ಸೆಕ್ಟರ್ 26ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪತ್ನಿಗೆ ಥಳಿಸಿದ ಪತಿಯನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ. 

ಇದನ್ನೂ ಓದಿRain Alert: ಈ ವರ್ಷ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ನಿರೀಕ್ಷೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News