ಬೆಂಗಳೂರು: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಬಿಜೆಪಿಯು ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆ ‘ಕಮಲ’ ಪಾಳೆಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. 230 ಕ್ಷೇತ್ರಗಳನ್ನು ಹೊಂದಿರುವ ಮಧ್ಯಪ್ರದೇಶದಲ್ಲಿ ಬಿಜೆಪಿ 165 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ 116 ಆಗಿದೆ. ಇಲ್ಲಿ ಕಾಂಗ್ರೆಸ್ ಕೇವಲ 63 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡರೆ, ಇನ್ನುಳಿದ 2 ಕ್ಷೇತ್ರಗಳಲ್ಲಿ ಇತರರು ಗೆಲುವು ಸಾಧಿಸಿದ್ದಾರೆ.


COMMERCIAL BREAK
SCROLL TO CONTINUE READING

ಅದೇ ರೀತಿ 199 ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ 115 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಕೇವಲ 70 ಕ್ಷೇತ್ರ ಮತ್ತು ಇತರರು 14 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸರ್ಕಾರ ರಚಿಸಲು ಇಲ್ಲಿ ಮ್ಯಾಜಿಕ್ ನಂಬರ್ 100 ಆಗಿದೆ. 90 ಕ್ಷೇತ್ರಗಳನ್ನು ಹೊಂದಿರುವ ಛತ್ತೀಸ್‌ಘಡದಲ್ಲಿ ಬಿಜೆಪಿ 53 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 35 ಕ್ಷೇತ್ರಗಳಲ್ಲಿ ಮತ್ತು 2 ಕ್ಷೇತ್ರಗಳಲ್ಲಿ ಇತರರು ಮುನ್ನಡೆ ಕಾಯ್ದುಕೊಂಡಿದ್ದಾರೆ.


ಇದನ್ನೂ ಓದಿ: MP Election Results: ಏಕಾಏಕಿ ಶಿವರಾಜ್ ಸಿಂಗ್ ಚೌಹಾಣ್ ಭೇಟಿಗೆ ಬಂದ ಜ್ಯೋತಿರಾದಿತ್ಯ ಸಿಂಧಿಯಾ, ರಹಸ್ಯವೇನು?


ಜಗದೀಶ್ ಹಿರೇಮನಿ, ಮಾಜಿ ಶಾಸಕ ನಂದೀಶ್ ರೆಡ್ಡಿ, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.  


ಇದನ್ನೂ ಓದಿ: ಕೆಸಿಆರ್‌ʼಗೆ ಶಾಕ್‌ ಕೊಟ್ಟ ಟ್ರಬಲ್‌ ಶೂಟರ್‌..! ತೆಲಂಗಾಣದಲ್ಲಿ ಮೋಡಿ ಮಾಡಿದ ʼಡಿಕೆಶಿʼ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.