MadhyaPradesh Assembly Election: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲಾ 230 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ  ಇಂದು ಮತದಾನ ನಡೆಯಲಿದೆ. ರಾಜ್ಯದ ಒಟ್ಟು 230 ವಿಧಾನಸಭಾ ಕ್ಷೇತ್ರಗಳಲ್ಲಿ 2,533 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಇವರಲ್ಲಿ 2,280 ಪುರುಷರು, 252 ಮಹಿಳೆಯರು ಮತ್ತು ಒಬ್ಬರು ತೃತೀಯಲಿಂಗಿ ತಮ್ಮ ಅದೃಷ್ಟವನ್ನು ಪರೀಕ್ಷಿಸುತ್ತಿದ್ದಾರೆ. 


COMMERCIAL BREAK
SCROLL TO CONTINUE READING

ಮಧ್ಯಪ್ರದೇಶದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಬೆಳಿಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಲಿದ್ದು, ಸಂಜೆ 6ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಆದರೆ,  ನಕ್ಸಲ್ ಪೀಡಿತ ಪ್ರದೇಶವಾಗಿರುವ ಬಾಲಘಾಟ್‌ನ ಮೂರು ಮತಗಟ್ಟೆಗಳು, ಮಂಡ್ಲಾದ 55 ಮತಗಟ್ಟೆಗಳಲ್ಲಿ ಮತ್ತು ದಿಂಡೋರಿಯ ನಾಲ್ಕು ಮತಗಟ್ಟೆಗಳಲ್ಲಿ ಮಾತ್ರ ಬೆಳಿಗ್ಗೆ 7ರಿಂದ ಮಧ್ಯಾಹ್ನ 3ಗಂಟೆವರೆಗಷ್ಟೇ ಮತದಾನಕ್ಕೆ ಅನುವು ಮಾಡಿಕೊಡಲಾಗಿದೆ. 


ಬಾಲಾಘಾಟ್ ಜಿಲ್ಲೆಯ ಬೈಹಾರ್, ಲಾಂಜಿ ಮತ್ತು ಪರಸ್ವಾಡ ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು  ಮಂಡ್ಲಾ ಜಿಲ್ಲೆಯ 55 ಮತಗಟ್ಟೆಗಳಲ್ಲಿ ಮತ್ತು ದಿಂಡೋರಿ ಜಿಲ್ಲೆಯ 40 ಮತಗಟ್ಟೆಗಳಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಮಧ್ಯಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಅನುಪಮ್ ರಾಜನ್ ಗುರುವಾರ ಮಾಹಿತಿ ನೀಡಿದ್ದಾರೆ. 


ಇದನ್ನೂ ಓದಿ- Voter ಐಡಿಗಾಗಿ ಸುಲಭವಾಗಿ ನೀವು ಕುಳಿತಲ್ಲಿಯೇ ಅರ್ಜಿ ಸಲ್ಲಿಸಿ


ಮಧ್ಯಪ್ರದೇಶದಲ್ಲಿ ಎಷ್ಟು ಮತದಾರರಿದ್ದಾರೆ? 
2023ರ ವಿಧಾನಸಭಾ ಚುನಾವಣೆಯಲ್ಲಿ ಮತಚಲಾಯಿಸಲು ಮಧ್ಯಪ್ರದೇಶದ ಒಟ್ಟು  5,60,60,925 ಮತದಾರರು ಮತದಾನದ ಹಕ್ಕನ್ನು ಹೊಂದಿದ್ದಾರೆ. ಇವರಲ್ಲಿ 2,88,25,607 ಪುರುಷರು, 2,72,33,945 ಮಹಿಳೆಯರು ಮತ್ತು 1,373 ತೃತೀಯಲಿಂಗಿಗಳು ಸೇರಿದ್ದಾರೆ. 


ಯಾವ ರಾಜಕೀಯ ಪಕ್ಷದಿಂದ ಎಷ್ಟು ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ? 
2023ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಎಲ್ಲಾ 230 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಇದರ ಹೊರತಾಗಿ ಸಮಾಜವಾದಿ ಪಕ್ಷ (ಎಸ್‌ಪಿ) ಸಂಸದೀಯ ಕ್ಷೇತ್ರದಲ್ಲಿ 71 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) 183 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಅದರ ಮಿತ್ರಪಕ್ಷವಾದ ಗೊಂಡ್ವಾನಾ ಗಂತಂತ್ರನ್ ಪಕ್ಷವು 45ಕ್ಕೂ ಹೆಚ್ಚು ನಾಮನಿರ್ದೇಶಿತರಿಗೆ ಟಿಕೆಟ್ ನೀಡಿದೆ. ಜನತಾದಳ (ಯು) 10 ಕ್ಷೇತ್ರಗಳಲ್ಲಿ ಚುನಾವಣೆ ಎದುರಿಸುತ್ತಿದ್ದು, ಆಮ್ ಆದ್ಮಿ ಪಕ್ಷ (ಎಎಪಿ) 66 ಅಭ್ಯರ್ಥಿಗಳ ಅದೃಷ್ಟವನ್ನು ಪರೀಕ್ಷಿಸುತ್ತಿದೆ. 


ಇದನ್ನೂ ಓದಿ- ವಿಧಾನಸಭಾ ಚುನಾವಣಾ ಸ್ಪರ್ಧೆಗೆ ಇಳಿದ ಮಠಾಧೀಶರು...!


2018ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಚಿತ್ರಣ ಹೇಗಿತ್ತು? 
2018ರಲ್ಲಿ ನಡೆದ ಮಧ್ಯಪ್ರದೇಶ ವಿಧಾನಸಭಾ ಚುನಾವ್ನೇಯಲ್ಲಿ ಕಾಂಗ್ರೆಸ್ 114  ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಕಮಲ್ ನಾಥ್ ನೇತೃತ್ವದಲ್ಲಿ ಸ್ವತಂತ್ರ್ಯ ಶಾಸಕರು ಸೇರಿದಂತೆ ಬಿ‌ಎಸ್‌ಪಿ ಮತ್ತು ಎಸ್‌ಪಿ ಜೊತೆಗೂಡಿ ಕಾಂಗ್ರೆಸ್ ಸರ್ಕಾರ ರಚಿಸಿತು. ಆದಾಗ್ಯೂ, ಈ ಸರ್ಕಾರ ಹೆಚ್ಚು ಸಮಯ ಉಳಿಯಲಿಲ್ಲ. ಆಪರೇಷನ್ ಕಮಲದಿಂದಾಗಿ  ಮಾರ್ಚ್ 2020 ರಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡು, ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಅನುವು ಮಾಡಿಕೊಟ್ಟಿತು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.