ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾತಕರು ರಾಜ್ಯದಲ್ಲಿ ಠಿಕಾಣಿ ಹೂಡಿದ್ದಾರೆ. ಶತಾಯಗತಾಯ ಈ ಬಾರಿ ಚುನಾವಣೆಯಲ್ಲಿ ಬಹುಮತ ಗಳಿಸಲೇಬೇಕೆಂಬ ಪಣ ತೊಟ್ಟಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಇಂದು ಬೆಳಗಾವಿ ಜಿಲ್ಲೆಯಲ್ಲಿ ಮತಬೇಟೆಗೆ ಮುಂದಾಗಿದ್ದಾರೆ. 


COMMERCIAL BREAK
SCROLL TO CONTINUE READING

ಇಂದು ಬೆಳಿಗ್ಗೆ 11.30ಕ್ಕೆ ಸವದತ್ತಿ ತಾಲೂಕು ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಅಮಿತ್ ಷಾ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 12.30ಕ್ಕೆ ಸವದತ್ತಿ ಎಲ್ಲಮನ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಬೆಳಗಾವಿಯ ವಡಗಾವ್'ನಿಂದ ಶಿವಾಜಿ ಉದ್ಯಾನವನದವರೆಗೆ ರೋಡ್ ಶೋ ನಡೆಸಲಿರುವ ಅಮಿತ್ ಷಾ, ಸಂಜೆ 4 ಗಂಟೆಗೆ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ರಾಮದುರ್ಗ ಕ್ಷೇತ್ರದ ಪ್ರಗತಿ ಮೈದಾನದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.