ಮೇ 8ರಂದು ರಾಜ್ಯದಲ್ಲಿ ಜೆಡಿಎಸ್ ಪರ ಓವೈಸಿ ಪ್ರಚಾರ

ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮೇ 8 ಮತ್ತು ಮೇ 8 ರಂದು ಜೆಡಿಎಸ್‌ ಪರ ಪ್ರಚಾರ ಮಾಡಲಿದ್ದಾರೆ.

Last Updated : May 6, 2018, 04:38 PM IST
ಮೇ 8ರಂದು ರಾಜ್ಯದಲ್ಲಿ ಜೆಡಿಎಸ್ ಪರ ಓವೈಸಿ ಪ್ರಚಾರ title=

ಬೆಂಗಳೂರು: ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ (ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್) ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮೇ 8ರಂದು 8ರಂದು ಜೆಡಿಎಸ್‌ ಪರ ಪ್ರಚಾರ ಮಾಡಲಿದ್ದಾರೆ.

ಮೇ 8 ರಂದು ಬೆಳಿಗ್ಗೆ ಬೆಳಿಗ್ಗೆ 11 ಗಂಟೆಗೆ ನಗರದ ಕ್ಲಬ್‌ ರಸ್ತೆಯಲ್ಲಿರುವ ಸಿಪಿಇಡಿ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿರುವ ಒವೈಸಿ, ಸಂಜೆ ಕಾಗವಾಡದಲ್ಲಿ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೇ 9ರಂದು ದಾವಣಗೆರೆ ಮತ್ತು ಹಾಸನದಲ್ಲಿ ಒವೈಸಿ ಪ್ರಚಾರ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ಈ ಹಿಂದೆ ತಮ್ಮ ಪಕ್ಷದಿಂದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಮತ್ತು ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಅಸಾದುದ್ದೀನ್ ಒವೈಸಿ ಹೇಳಿದ್ದರು. ಅದರಂತೆ, ಇದೀಗ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಮೇ 8 ಮತ್ತು 9 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

Trending News