ಕರ್ನಾಟಕ ಚುನಾವಣೆ: ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್
ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಂಸದೆ ಹೇಮಾ ಮಾಲಿನಿ, ಶಾಸಕಿ ತಾರಾ, ಖುಷ್ಬೂ ಸೇರಿದಂತೆ ಒಟ್ಟು 40 ನಾಯಕರನ್ನು ಪಕ್ಷದ ಸ್ಟಾರ್ ಪ್ರಚಾರಕರಾಗಿ ಬಿಜೆಪಿ ನೇಮಿಸಿದೆ.
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಒಟ್ಟು 40 ನಾಯಕರನ್ನು ಪಕ್ಷದ ಸ್ಟಾರ್ ಪ್ರಚಾರಕರಾಗಿ ಬಿಜೆಪಿ ನೇಮಿಸಿದೆ.
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಸಂಸದೆ ಹೇಮಾ ಮಾಲಿನಿ, ಶಾಸಕಿ ತಾರಾ, ಖುಷ್ಬೂ ಸೇರಿದಂತೆ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ಘಟಕಗಳ ಒಟ್ಟು 40 ನಾಯಕರನ್ನು ಪಕ್ಷದ ಸ್ಟಾರ್ ಪ್ರಚಾರಕರಾಗಿ ಬಿಜೆಪಿ ನೇಮಿಸಿದೆ.
ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ, ಡಿ.ವಿ.ಸದಾನಂದಗೌಡ, ಅನಂತಕುಮಾರ್, ಪ್ರಕಾಶ್ ಜಾವಡೇಕರ್, ಪಿಯೂಷ್ ಗೋಯಲ್, ರವಿಶಂಕರ್ ಪ್ರಸಾದ್, ಸ್ಮೃತಿ ಇರಾನಿ, ತಾವರ್‌ಚಂದ್ ಗೆಹ್ಲೋಟ್, ಅನಂತ್‌ಕುಮಾರ್ ಹೆಗಡೆ, ಸಾಧ್ವಿ ನಿರಂಜನ ಜ್ಯೋತಿ, ಅನಂತಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ ಇದ್ದಾರೆ.
ಅಲ್ಲದೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಮ್‌ಲಾಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳೀಧರರಾವ್, ಕೇಂದ್ರದ ಮಾಜಿ ಸಚಿವೆ ಡಿ.ಪುರಂದೇಶ್ವರಿ, ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಸಂಸದರಾದ ಪ್ರಹ್ಲಾದ್ ಜೋಶಿ, ಹೇಮಾ ಮಾಲಿನಿ, ಮನೋಜ್ ತಿವಾರಿ, ಬಿ.ಶ್ರೀರಾಮುಲು, ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ ಇದ್ದಾರೆ.
ಇವರೊಂದಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಒಬಿಸಿ ಮೋರ್ಚಾ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ಡಿ.ಎಸ್.ವೀರಯ್ಯ, ವಿಧಾನಪರಿಷತ್ ಸದಸ್ಯೆ ತಾರಾ ಅನುರಾಧ ಹಾಗೂ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರುತಿ ಅವರು ಪಕ್ಷದ ಸ್ಟಾರ್ ಪ್ರಚಾರಕರಾಗಿ ನೆಮವಾಗಿದ್ದು, ಪಕ್ಷದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.