ಬೆಂಗಳೂರು: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದಲ್ಲಿ ಭುಗಿಲೆದ್ದಿದ್ದ ಕಾರ್ಯಕರ್ತರ ಆಕ್ರೋಶ ತಣ್ಣಗಾಗಿಸಲು ಬಿಜೆಪಿ ಮತ್ತೊಂದು ತಂತ್ರ ಹೂಡಿದೆ.
ವರುಣಾ ರಣರಂಗದಿಂದ ವಿಜಯೇಂದ್ರ ಔಟ್; ಭುಗಿಲೆದ್ದ ಕಾರ್ಯಕರ್ತರ ಆಕ್ರೋಶ
ಸೋಮವಾರ ನಂಜನಗೂಡಿನಲ್ಲಿ ವಿಜಯೇಂದ್ರ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಬಿ.ಎಸ್.ಯಡಿಯುರಪ್ಪ ಘೋಷಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರಗೆ ಟಿಕೆಟ್ ನೀಡಲೇಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆ ಆರಂಭಿಸಿದ್ದಾರೆ. ಆದರೆ ಬಿಜೆಪಿ ಹೈಕಮ್ಯಾಂಡ್ ಮಾತ್ರ ತನ್ನ ನಿಲುವನ್ನು ಬದಲಾಯಿಸದೆ, ಬಿ.ವೈ.ವಿಜಯೇಂದ್ರಗೆ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಿ, ಕಾರ್ಯಕರ್ತರನ್ನು ತಣ್ಣಗಾಗಿಸಲು ಪ್ರಯತ್ನಿಸಿದೆ.
ವಿಜಯೇಂದ್ರಗೆ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿರುವ ಬಗ್ಗೆ ಕರ್ನಾಟಕ ಬಿಜೆಪಿ ತನ್ನ ಟ್ವಿಟರ್‌ನಲ್ಲಿ ಅಧಿಕೃತವಾಗಿ ಪ್ರಕಟಿಸಿದೆ.
Congratulations to Shri BY Vijayendra on his appointment as State General Secretary, Yuva Morcha. His addition will greatly boost the party cadre and strengthen our organisation in the Old Mysuru region.
He will be campaigning extensively for candidates in the Old Mysuru region.
— BJP Karnataka (@BJP4Karnataka) April 24, 2018