ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಚಿವೆ ಸಾಧ್ವಿ ನಿರಂಜನ ಜ್ಯೋತಿಗೆ ಅವಮಾನ!
ಯಾದಗಿರಿ ಜಿಲ್ಲಾಧಿಕಾರಿ ಉದ್ದೇಶಪೂರ್ವಕವಾಗಿ ಅವರ ಹೆಲಿಕಾಫ್ಟರ್ ಇಳಿಯಲು ಅನುಮತಿ ನೀಡಿಲ್ಲ ಎಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.
ಬೆಂಗಳೂರು: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಾಧ್ವಿ ನಿರಂಜನ ಜ್ಯೋತಿ ಅವರಿಗೆ ಕಿರುಕುಳ ನೀಡಿ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಯಾದಗಿರಿ ಜಿಲ್ಲಾಧಿಕಾರಿ ಉದ್ದೇಶಪೂರ್ವಕವಾಗಿ ಅವರ ಹೆಲಿಕಾಫ್ಟರ್ ಇಳಿಯಲು ಅನುಮತಿ ನೀಡಿಲ್ಲ ಎಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.
ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಸಂಸದೆ ಸಾಧ್ವಿ ನಿರಂಜನ್ ಜ್ಯೋತಿ ಆಹಾರ ಸಂಸ್ಕರಣಾ ಇಂಡಸ್ಟ್ರೀಸ್ ರಾಜ್ಯ ಸಚಿವೆಯಾಗಿದ್ದಾರೆ.