ರಾಜ್ಯದಲ್ಲಿಂದು ಬಿಜೆಪಿ ಫೈರ್ ಬ್ರಾಂಡ್ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಇಂದು ರಾಜ್ಯದ ಹಲವೆಡೆ ಆಯೋಜಿಸಲಾಗಿರುವ ಸಾರ್ವಜನಿಕ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.
ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಮತ್ತೆ ಆಗಮಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ ಶಿರಸಿ, ಸಾಗರ, ಬಾಳೆಹೊನ್ನೂರು, ಬೇಲೂರು ಮತ್ತು ಹೊನ್ನಾಳಿಯಲ್ಲಿಂದು ಸಾರ್ವಜನಿಕ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.
ವಿಶೇಷ ವಿಮಾನದ ಮೂಲಕ ಲಕ್ನೋ ವಿಮಾನ ನಿಲ್ದಾಣದಿಂದ ಇಂದು ಬೆಳಿಗ್ಗೆ ಹುಬ್ಬಳ್ಳಿ ತಲುಪಿರುವ ಬಿಜೆಪಿ ಫೈರ್ ಬ್ರಾಂಡ್ ಅಲ್ಲಿಂದ ಹೆಲಿಕಾಫ್ಟರ್ ಮೂಲಕ ಶಿರಸಿ, ಸಾಗರ, ತಿಪಟೂರು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದು ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.
ಇನ್ನು ಚುನಾವಣಾ ಪ್ರಚಾರಕ್ಕಾಗಿ ಮತ್ತೆ ರಾಜ್ಯಕ್ಕೆ ಆಗಮಿಸುತ್ತಿರುವ ಯುಪಿ ಸಿಎಂ ಯೋಗಿ, ಹೊನ್ನಾಳಿಯ ಬಿಜೆಪಿ ಅಭ್ಯರ್ಥಿ ಎಂ.ಪಿ. ರೇಣುಕಾಚಾರ್ಯ ಪರ ಪ್ರಚಾರ ಕೈಗೊಳ್ಳಲಿದ್ದಾರೆ. ನಂತರ ನಗರದ ಹೆರೀಕಲ್ಮಠದಲ್ಲಿ ವಾಸ್ತವ್ಯ ಹೂಡಲಿದ್ದಾರೆ.