ಬೆಂಗಳೂರು : ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಕರನಾಟ ವಿಧಾನಸಭೆ ಚುನಾವಣೆಯಾ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಬಿಜೆಪಿ ಮ್ಯಾಜಿಕ್ ನಂಬರ್ 113 ಸ್ಥಾನಗಳತ್ತ ದಾಪುಗಾಲು ಹಾಕುತ್ತಿದೆ. ಆದರೆ, ಕಾಂಗ್ರೆಸ್ ಹಿನ್ನಡೆ ಸಾಧಿಸಿದ್ದು, ಜೆಡಿಎಸ್ ಜೊತೆ ಮೈತ್ರಿ ಹೊಂದುವ ಇಂಗಿತ ವ್ಯಕ್ತಪಡಿಸಿದೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಚುನಾವಣೆಯ ಫಲಿತಾಂಶದ ನಿರ್ದಿಷ್ಟ ಚಿತ್ರಣ 11 ಗಂಟೆಯೊಳಗೆ ತಿಳಿಯಲಿದೆ. ಜೆಡಿಎಸ್ ಜೊತೆ ಮೈತ್ರಿ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕರಾದ ಅಶೋಕ್ ಗೆಹ್ಲೋಟ್ ಮತ್ತು ಗುಲಾಂ ನಬಿ ಅಜಾದ್ ಅವರೊಂದಿಗೆ ಚರ್ಚಿಸಲು ಹೋಗುತ್ತಿರುವುದಾಗಿ ತಿಳಿಸಿದ್ದಾರೆ. 



ಮತ್ತೊಂದೆಡೆ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಅವರೂ ಸಹ ಜೆಡಿಎಸ್ ಜೊತೆ ಮೈತ್ರಿ ಸಾಧ್ಯತೆ ಕುರಿತು ಮಾತನಾಡಿದ್ದು, ಫಲಿತಾಂಶ ಏನೇ ಇದ್ದರೂ ಅದನ್ನು ಸ್ವಿಕರಿಸಲು ತಾವು ಸಿದ್ದ ಎಂದು ಹೇಳಿದ್ದಾರೆ.



ಕರ್ನಾಟಕ ವಿಧಾನಸಭೆ ಚುನಾವಣೆಯಾ ಮತ ಎಣಿಕೆ ಆರಂಭವಾಗಿದ್ದು, ಜನಾದೇಶ ಪಡೆಯುವ ಕಾಲ ಸನ್ನಿಹಿತವಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮೇ 12ರಂದು ಮತದಾನ ನಡೆದಿತ್ತು.