ಕರ್ನಾಟಕದಲ್ಲಿ ಬಿಜೆಪಿಯಿಂದ ಅಧಿಕಾರ ದುರುಪಯೋಗ: ಮಾಯಾವತಿ
ವಿಧಾನಸಭೆಯಲ್ಲಿ ಬಹುಮತ ಇಲ್ಲದಿದ್ದರೂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುವುದು ಖಂಡನೀಯ.
ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ದೊರೆತು ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬಿಎಸ್ಪಿ ನಾಯಕಿ ಹಾಗೂ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆಯಲ್ಲಿ ಬಹುಮತ ಇಲ್ಲದಿದ್ದರೂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುವುದು ಖಂಡನೀಯ. ಇದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ನಾಶಪಡಿಸುವ ಪಿತೂರಿಯಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೇ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಸುಪ್ರೀಂಕೋರ್ಟ್ ಲೋಕತಂತ್ರವನ್ನ ಎತ್ತಿ ಹಿಡಿಯುವ ಕೆಲಸ ಮಾಡಬೇಕು ಎಂದು ಮಾಯಾವತಿ ಒತ್ತಾಯಿಸಿದ್ದಾರೆ.