ಮೈಸೂರು : ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಬಿಎಸ್ಪಿ ಮುಖ್ಯಸ್ಥೆ ಹಾಗೂ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಮೈಸೂರಿಗೆ ಆಗಮಿಸಿ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. 


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ಎರಡು ಹಂತದಲ್ಲಿ ಪ್ರವಾಸ ಕೈಗೊಳ್ಳಲ್ಳುತ್ತಿರುವ ಉತ್ತರ ಪ್ರದೇಶದ ಮಾಜಿ ಸಿಎಂ ಮಾಯಾವತಿ, ಮೊದಲ ಹಂತದ ಪ್ರವಾಸದಲ್ಲಿ ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ 3.30 ಕ್ಕೆ ನಡೆಯಲಿರುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಜೆಡಿಎಸ್ ವರಿಷ್ಠ ಹಾಗು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಮುಖಂಡರು ಭಾಗವಹಿಸಲಿದ್ದಾರೆ. ಅಲ್ಲದೆ, ನಾಳೆ (ಏಪ್ರಿಲ್ 26) ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಲಿರುವ ಮಾಯಾವತಿ ಅಲ್ಲಿಯೂ ಜೆಡಿಎಸ್ ಪರ ಪ್ರಚಾರ ಮಾಡಲಿದ್ದಾರೆ.


ಮೇ 5 ಮತ್ತು ಮೇ 6ರಂದು ಎರಡನೇ ಹಂತದ ರಾಜ್ಯ ಪ್ರವಾಸವನ್ನು ಕೈಗೊಳ್ಳುತ್ತಿರುವ ಮಾಯಾವತಿ, ಕೋಲಾರ, ಬೆಳಗಾವಿ, ಕಲಬುರಗಿ, ರಾಯಚೂರು ಜಿಲ್ಲೆಗೆಳಲ್ಲಿ ಪ್ರಚಾರ ಮಾಡಲಿದ್ದಾರೆ.  ರಾಜ್ಯದಲ್ಲಿ ದಲಿತ ಮತಗಳನ್ನು ಸೆಳೆಯಲು ಜೆಡಿಎಸ್ ಮಾಯಾವತಿ ಅವರನ್ನು ರಾಜ್ಯಕ್ಕೆ ಕರೆತಂದಿದ್ದು, ಶತಾಯ ಗತಾಯ ಈ ಬಾರಿ ಚುನಾವಣೆಯಲ್ಲಿ ಬಹುಮತ ಗಳಿಸಬೇಕೆಂಬ ಪಣ ತೊಟ್ಟಿದೆ. ಆದರೆ ಮತದಾರಣ ಅಂತಿಮ ನಿರ್ಧಾರ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.