ಮೈಸೂರು: ದಿಢೀರ್ ಬೆಳವಣಿಗೆಯೊಂದರಲ್ಲಿ ವರುಣಾ ಕ್ಷೇತ್ರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಪರ್ಧಿಸುವುದು ಅನುಮಾನ ಎಂಬ ವದಂತಿ ಹರಿದಾಡುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇಂದು ಬಿಡುಗಡೆಯಾದ ನಾಲ್ಕನೇ ಪಟ್ಟಿಯಲ್ಲೂ ವರುಣಾ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿಲ್ಲ.


COMMERCIAL BREAK
SCROLL TO CONTINUE READING

ವರುಣಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ವಿಜಯೇಂದ್ರ ಕಳೆದ ಒಂದು ವಾರದಿಂದ ಅಲ್ಲಿಯೇ ಬೀಡುಬಿಟ್ಟಿದ್ದಾರೆ. ಆದರೆ ನಂಜನಗೂಡಿನಲ್ಲಿ ಇಂದು ಬಿಜೆಪಿ ಸಮಾವೇಶದಲ್ಲಿ ವರುಣಾ ಕ್ಷೇತ್ರದಿಂದ ತಮ್ಮ ಪುತ್ರ ಸ್ಪರ್ಧಿಸುವುದಿಲ್ಲ ಎಂದು ಬಿಎಸ್ ವೈ ಸ್ಪಷ್ಟಪಡಿಸಿದ್ದಾರೆ. ಸುದ್ದಿ ಕೇಳುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತ ಪಡಿಸಿದ್ದು, ವಿಜಯೇಂದ್ರ ಅವರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದ್ದಾರೆ. 


ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ವಿರುದ್ಧ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಪರ್ಧೆ  ಪ್ರಶ್ನೆಯಾಗಿಯೇ ಉಳಿದಿದ್ದು, ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ಸಂಜೆಯೊಳಗೆ ತೆರೆ ಬೀಳಲಿದೆ.