ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜತೆಗೆ ಬಾಗಲಕೋಟೆಯ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವ ವಿಷಯ ಇನ್ನೂ ಕಗ್ಗಂಟಾಗಿಯೇ ಉಳಿದಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಗುರುವಾರ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ, ನಾನು ಎರಡು ಕಡೆ ಸ್ಪರ್ಧಿಸಬೇಕೋ, ಬೇಡವೋ ಎಂಬುದನ್ನು ಹೈಕಮಾಂಡ್‌ ನಿರ್ಧರಿಸಲಿದೆ. ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳಳು ನಾನು ಹೈಕಮಾಂಡ್ ಅಲ್ಲ. ಈ ರಾಜ್ಯದ ಮುಖ್ಯಮಂತ್ರಿ ಅಷ್ಟೆ. ಬಾದಾಮಿ ಕ್ಷೇತ್ರದ ಸ್ಪರ್ಧೆಯ ವಿಚಾರ ಈ ತಿಂಗಳ 23 ಅಥವಾ 24ರಂದು ಬಗೆಹರಿಯಲಿದೆ ಎಂದಿದ್ದರು.


ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಾದಾಮಿಯಿಂದ ಸ್ಪರ್ಧಿಸುವುದನ್ನು ನಾನು ಬೇಡ ಎಂದಿದ್ದೆ. ಆದರೆ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಮುಖಂಡರು, ಎಸ್‌.ಆರ್‌. ಪಾಟೀಲ್‌,  ಎಂ.ಬಿ .ಪಾಟೀಲ್‌,  ತಿಮ್ಮಾಪುರ ಮೊದಲಾದ ನಾಯಕರು ಬಾದಾಮಿಯಂದ ಸ್ಪರ್ಧಿಸಲು ಒತ್ತಾಯಿಸುತ್ತಿದ್ದು, ಹೈಕಮಾಂಡ್‌ಗೆ ಈ ಬಗ್ಗೆ ಮನವಿಯನ್ನೂ ಸಲ್ಲಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ನಾಳೆ(ಏಪ್ರಿಲ್ 21) ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.