ಬೆಂಗಳೂರು:   ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ವಿಧಾನಸಭೆ ಚುನಾವಣೆ ಫ‌ಲಿತಾಂಶ ಪ್ರಕಟವಾಗಿದ್ದು, ಸಮೀಕ್ಷೆಗಳು ಹೇಳಿದಂತೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು,  222 ಸ್ಥಾನಗಳ ಫ‌ಲಿತಾಂಶ ಪ್ರಕಟವಾಗಿದೆ. ಬಿಜೆಪಿ 103 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್‌ 78, ಜೆಡಿಎಸ್‌ 38, ಇತರರು 2 ಸ್ಥಾನ ಗಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್‌ 78, ಜೆಡಿಎಸ್‌ 38, ಇಬ್ಬರು ಸ್ವತಂತ್ರ ಶಾಸಕರೊಂದಿಗೆ ಕೂಡಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಮುಂದಾಗಿದೆ. 
 
ಕಾನೂನು ಬಹಳ ಸ್ಪಷ್ಟವಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸಂಖ್ಯಾ ಬಲದ ಮೇಲೆ ಸರ್ಕಾರ ರಚಿಸಲು ಅವಕಾಶವಿದೆ. ರಾಜ್ಯಪಾಲರು ಚುನಾವಣಾ ಆಯೋಗದಿಂದ ಪಟ್ಟಿ ತರಿಸಿಕೊಂಡ ನಂತರ ಸಂಖ್ಯಾ ಬಲ ಹೊಂದಿರುವ ನಮಗೆ ಸರ್ಕಾರ  ರಚಿಸಲು ಅವಕಾಶ ಮಾಡಿಕೊಡಲಿದ್ದಾರೆ ಎಂಬ ವಿಶ್ವಾಸ ನಮಗಿದೆ. ಸರ್ಕಾರ ರಚಿಸಲು 113 ಮ್ಯಾಜಿಕ್ ನಂಬರ್, ಕಾಂಗ್ರೆಸ್-78, ಜೆಡಿಎಸ್-38 ಮತ್ತು ಇಬ್ಬರು ಪಕ್ಷೇತರರು ಸೇರಿ ನಾವು 118 ಸಂಖ್ಯಾ ಬಲವನ್ನು ಹೊಂದಿದ್ದೇವೆ. ಹಾಗಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವಂತೆ ಸಂಖ್ಯಾಬಲದ ಆಧಾರದ ಮೇಲೆ ನಮಗೆ ಸರ್ಕಾರ ರಚಿಸಲು ಅವಕಾಶ ಸಿಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರ ರಚನೆಗೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದರಿಂದ ಸರ್ಕಾರ ರಚನೆ ನಿಟ್ಟಿನಲ್ಲಿ ಬಿಜೆಪಿಯ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಹೆಚ್ಚಿದೆ.


ಏತನ್ಮಧ್ಯೆ, ಕಾಂಗ್ರೆಸ್, ಜೆಡಿಎಸ್ ನಾಯಕರಿಗೆ ಆಪರೇಷನ್ ಕಮಲದ ಭೀತಿ ಎದುರಾಗಿದೆ. ಉಭಯ ಪಾಳಯದಲ್ಲಿ ಎಲ್ಲಿ ನಮ್ಮ ಶಾಸಕರನ್ನ ಬಿಜೆಪಿ ಚಾಣಕ್ಯ ಹೈಜಾಕ್ ಮಾಡಿಸ್ತಾರೋ ಅನ್ನೋ ಭಯ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ,ಜೆಡಿಎಸ್ ಶಾಸಕರು ರೆಸಾರ್ಟ್ ಗೆ ಶಿಫ್ಟ್ ಆಗುವ ಸಾಧ್ಯತೆ ಇದೆ. ಕೇರಳದತ್ತ ಉಭಯ ಪಕ್ಷಗಳ ಶಾಸಕರ ಚಿತ್ತ ನೆಟ್ಟಿದ್ದು, ಕೇರಳದ ಕೊಚ್ಚಿನ್ ಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನ ಪ್ರತ್ಯೇಕವಾಗಿ ಬೇರೆ ಬೇರೆ ರೆಸಾರ್ಟ್ ಗಳಿಗೆ ಕರೆದುಕೊಂಡು ಹೋಗಬೇಕೋ ಅಥವಾ ಒಂದೆಡೆ ಸೇರಿಸಬೇಕೋ ಅನ್ನೋದರ ಬಗ್ಗೆ ಇನ್ನೂ ಫೈನಲ್ ಆಗಬೇಕಿದೆ.