ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಜಿದ್ದಾಜಿದ್ದಿ ಕಣವಾಗಿದ್ದ ರಾಜರಾಜೇಶ್ವರಿ ನಗರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ. ಬಿಜೆಪಿಯ ತುಳಸಿ ಮುನಿರಾಜು ಗೌಡ ಎರಡನೇ ಸ್ಥಾನ ಪಡೆದರೆ, ಜೆಡಿಎಸ್‍ನ ಜಿ.ಎಚ್. ರಾಮಚಂದ್ರ ಮೂರನೇ ಸ್ಥಾನ ಪಡೆದಿದ್ದಾರೆ.


COMMERCIAL BREAK
SCROLL TO CONTINUE READING

ಮೈಸೂರು ರಸ್ತೆ ಹಲಗೆವಡೇರಹಳ್ಳಿಯ ಶ್ರೀ ಜ್ಞಾನಶಕ್ತಿ ವಿದ್ಯಾನಿಕೇತನ ಶಾಲೆಯಲ್ಲಿ  ಬೆಳಗ್ಗೆ 8 ಗಂಟೆಯಿಂದ ಆರಂಭವಾದ ಮತಎಣಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮುನಿರತ್ನ ಅವರು ಆರಂಭದಿಂದಲೂ ಭಾರೀ ಮುನ್ನಡೆ ಕಾಯ್ದುಕೊಂಡಿದ್ದರು.


ಒಟ್ಟು 18 ಸುತ್ತುಗಳ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 1,08,064 ಮತಗಳು, ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜುಗೌಡ 82,572 ಮತಗಳು, ಜೆಡಿಎಸ್ ಅಭ್ಯರ್ಥಿ ಜಿ.ಎಸ್. ರಾಮಚಂದ್ರ 60,360 ಮತಗಳು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹುಚ್ಚ ವೆಂಕಟ್ 604 ಮತಗಳು ಗಳಿಸಿದ್ದು, ಒಟ್ಟು 2,061 ನೋಟಾ ಮತಗಳು ಬಿದ್ದಿವೆ.


ಮತದಾರರ ಚೀಟಿ ಪತ್ತೆಯಾದ ಹಿನ್ನೆಲೆಯಲ್ಲಿ ಮೇ 12 ರಂದು ನಡೆಯಬೇಕಿದ್ದ ಚುನಾವಣೆ ಮೇ 28ಕ್ಕೆ ಮತದಾನ ಮುಂದೂಡಿಕೆಯಾಗಿತ್ತು.