ನವದೆಹಲಿ : ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ 9 ಸಾವಿರಕ್ಕೂ ಅಧಿಕ ಮತದಾರರ ಗುರುತಿನ ಚೀಟಿ ಪತ್ತೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಬುಧವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಬಿಜೆಪಿಯಿಂದ ಸರ್ಕಾರಿ ಸಂಸ್ಥೆಗಳ ದುರುಪಯೋಗ: ಸಿದ್ದರಾಮಯ್ಯ
ದೂರು ಸಲ್ಲಿಸಿದ ಬಳಿಕ ಮಾತನಾಡಿದ ಕಾಂಗ್ರೆಸ್ ನಿಯೋಗದ ಆನಂದ್ ಶರ್ಮಾ, ಕರ್ನಾಟಕದಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಷಾ ಅವರ ಪ್ರಚಾರ ಯಾವುದೇ ಫಲ ನೀಡುತ್ತಿಲ್ಲ. ಹಾಗಾಗಿ ಬಿಜೆಪಿ ಅವರಿಗೆ ಚುನಾವಣೆಯಲ್ಲಿ ಸೋಲಿನ ಭಯಾ ಎದುರಾಗಿದೆ. ಹಾಗಾಗಿ ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಐಟಿ ಸೇರಿದಂತೆ ಇತರ ಇಲಾಖೆಗಳನ್ನು ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ವಿರುದ್ಧ ಷಡ್ಯಂತ್ರ ರೂಪಿಸುತ್ತಿದೆ ಎಂದು ಆರೋಪಿಸಿದರು.
ಅಕ್ರಮವಾಗಿ ಸಂಗ್ರಹಿಸಿದ್ದ 9000ಕ್ಕೂ ಅಧಿಕ ಮತದಾರರ ಗುರುತಿನ ಚೀಟಿ ಪತ್ತೆ
ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ಒಂದರಲ್ಲಿ ಮಂಗಳವಾರ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಸುಮಾರು 9,746 ಮತದಾರರ ಗುರುತಿನ ಚೀಟಿ ಪತ್ತೆಯಾಗಿದ್ದು, ಚುನಾವಣಾ ಅಧಿಕಾರಿಗಳು ಅದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷಗಳೂ ಆರೋಪ-ಪ್ರತ್ಯಾರೋಗಳಲ್ಲಿ ತೊಡಗಿವೆ. ಈ ಸಂಬಂಧ ಈಗಾಗಲೇ ಜಾಲಹಳ್ಳಿ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ಪ್ರಗತಿಯಲ್ಲಿದೆ.