ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಟ ಶಶಿಕುಮಾರ್ ಇಂದು ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಶಶಿಕುಮಾರ್ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಅವರು ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಸೇರಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ದೇವೇಗೌಡರು ಒಪ್ಪಿದರೆ ಹೊಸದುರ್ಗ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಿದ್ದನಿದ್ದೇನೆ ಎಂದು ತಿಳಿಸಿದ್ದಾರೆ.