ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷವೂ ಬಹುಮತ ಪಡೆಯದ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ರಾಜಕೀಯ ಪಕ್ಷಗಳು ಕಸರತ್ತು ನಡೆಸುತ್ತಿದ್ದು, ರೆಸಾರ್ಟ್ ರಾಜಕಾರಣ ಆರಂಭವಾಗಿದೆ. 


COMMERCIAL BREAK
SCROLL TO CONTINUE READING

ಮ್ಯಾಜಿಕ್ ನಂಬರ್ ಇಲ್ಲದಿದ್ದರೂ ಬಿಜೆಪಿ ಸರ್ಕಾರ ರಚನೆ ಮಾಡುವುದಾಗಿ ಹೇಳುತ್ತಿದ್ದು, ಆಪರೇಶನ್ ಕಮಲದ ಭೀತಿಯಲ್ಲಿರುವ ಕಾಂಗ್ರೆಸ್ ತನ್ನ ಪಕ್ಷದ ಎಲ್ಲಾ ಶಾಸಕರನ್ನು ರೆಸಾರ್ಟ್ಗೆ ಕರೆದೊಯ್ಯಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕೆಪಿಸಿಸಿ ಕಚೇರಿ ಎದುರು ಶಾಸಕರನ್ನು ಕರೆದೊಯ್ಯಲು ಬಸ್ ಕೂಡ ಸಿದ್ಧವಾಗಿದೆ. 


ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿದರೆ ಪ್ರತಿಭಟನೆ - ಸಿದ್ದರಾಮಯ್ಯ


ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಶಾಸಕರನ್ನು ರಾಮನಗರದ ಈಗಲ್‌ಟನ್‌ ರೆಸಾರ್ಟ್‌ಗೆ ಕರೆದೊಯ್ಯಲಾಗುತ್ತಿದ್ದು, ಕೆಲವು ಶಾಸಕರು ಬಸ್ ನಲ್ಲಿ ತೆರಳಲಿದ್ದು, ಮತ್ತೆ ಕೆಲವರು ಅವರವರ ವಾಹನದಲ್ಲಿ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ ರಾಜಭವನಕ್ಕೆ ತೆರಳಿ ಪರೇಡ್ ನಡೆಸಲಿದ್ದಾರೆ ಎನ್ನಲಾಗಿದೆ. 


ಶಾಸಕರಿಗೆ ಬಿಜೆಪಿಯಿಂದ 100 ಕೋಟಿ ರೂ., ಮಂತ್ರಿ ಸ್ಥಾನದ ಆಫರ್: ಕುಮಾರಸ್ವಾಮಿ


ಈಗಾಗಲೇ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಯಲ್ಲಿ ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಎರಡೂ ಪಕ್ಷದ ಶಾಸಕಾಂಗ ಪಕ್ಷ ನಾಯಕರು ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ್ದು, ರಾಜ್ಯಪಾಲರ ಉತ್ತರಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಬಿಜೆಪಿ ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದು, ಸರಕಾರ ರಚಿಸುವ ಪ್ಲಾನ್ ಮಾಡಿರುವ ಹಿನ್ನೆಲೆಯಲ್ಲಿ ತಮ್ಮ ಪಕ್ಷಗಳ ಶಾಸಕರನ್ನು ರಕ್ಷಿಸಿಕೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ನಾಯಕರು ಶಾಸಕರನ್ನು ರೆಸಾರ್ಟ್'ಗೆ ಕರೆದೊಯ್ಯುತ್ತಿದ್ದಾರೆ ಎನ್ನಲಾಗಿದೆ.