ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ನಡೆಯುತ್ತಿದೆ: ರಾಮಲಿಂಗಾರೆಡ್ಡಿ

ಬಿಜೆಪಿ ನಾಯಕರ ಮೇಲೆ ಗಂಭೀರ ಆರೋಪ ಮಾಡಿದ ಗೃಹ ಸಚಿವ ರಾಮಲಿಂಗಾರೆಡ್ಡಿ.

Last Updated : Apr 27, 2018, 04:21 PM IST
ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ನಡೆಯುತ್ತಿದೆ: ರಾಮಲಿಂಗಾರೆಡ್ಡಿ title=
ಸಾಂದರ್ಭಿಕ

ಬೆಂಗಳೂರು: ಕಳೆದ 15 ದಿನಗಳಿಂದ ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ನಡೆಯುತ್ತಿದೆ. ಅಮಿತ್ ಶಾ ಸೂಚನೆ ಮೇರೆಗೆ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕರ ಮೇಲೆ ಗೃಹ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ರಾಮಲಿಂಗಾ ರೆಡ್ಡಿ, ಕಳೆದ ೧೫ ದಿನಗಳಿಂದ ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ನಡೆಯುತ್ತಿದೆ. ದೆಹಲಿ ,ಗುಜರಾತ್, ಜೈಪುರ ತಂಡದಿಂದ ಪೋನ್ ಕದ್ದಾಲಿಕೆ ನಡೆಯುತ್ತಿದ್ದು ನಮ್ಮ ಸ್ಟ್ರಾಟಜಿಗಳನ್ನ ಕದಿಯುತ್ತಿದ್ದಾರೆ. ಕನ್ನಡದಲ್ಲಿ ಮಾತನಾಡಿದ್ದನ್ನ ಹಿಂದಿ, ಇಂಗ್ಗೀಷ್ ನಲ್ಲಿ ಟ್ರಾನ್ಸ್ ಲೇಟ್ ಮಾಡುಲಾಗುತ್ತಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿ ಐಟಿ ರೇಡ್ ಮಾಡಿಸಲಾಗುತ್ತಿದೆ. ಅಲ್ಲದೆ ಕಾಂಗ್ರೆಸ್ ಜೊತೆ ಉತ್ತಮ ಸಂಬಂಧ ಹೊಂದಿರುವ ಉದ್ಯಮಿಗಳನ್ನು ಸಹ ಟಾರ್ಗೆಟ್ ಮಾಡಲಾಗುತ್ತಿದೆ ಎಂದೂ ಸಹ ಗೃಹ ಸಚಿವರು ಆರೋಪ ಮಾಡಿದ್ದಾರೆ. ಫೋನ್ ಕದ್ದಾಲಿಕೆ ಬಗ್ಗೆ ನಿಖರವಾದ ಮಾಹಿತಿ ಇದೆ. ಗುಪ್ತಚರ ಇಲಾಖೆಯಿಂದ ಮಾಹಿತಿ ಸಿಕ್ಕಿದೆ. ಸುಮಾರು 100ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ಪೋನ್ ಕದ್ದಾಲಿಕೆ ಆಗುತ್ತಿದೆ. ಈ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಪೋನ್ ಕದ್ದಾಲಿಕೆ ಬಗ್ಗೆ ತನಿಖೆ ನಡೆಸುವಂತೆ ಆಗ್ರಹ ಮಾಡಿದ್ದೇವೆ. ಮುಖ್ಖಮಂತ್ರಿ ಗಳ ಜೊತೆ ಚರ್ಚೆ ಮಾಡಿ ಈ ಬಗ್ಗೆ ತೀರ್ಮಾನ ತೆಗದುಕೊಳ್ಳುತ್ತೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಬಿಜೆಪಿ ಜಾಹೀರಾತು ನೂರಕ್ಕೆ ನೂರು ಸುಳ್ಳು
ಇದೇ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಜೆಪಿ ಜಾಹೀರಾತು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ನೂರಕ್ಕೆ ನೂರರಷ್ಟು ಹಸಿ ಸುಳ್ಳು ಜಾಹೀರಾತು ನೀಡಲಾಗ್ತಿದೆ. ಯಾವುದೇ ಸಾಕ್ಷ್ಯಧಾರವಿಲದೇ ಸುಳ್ಳು ಜಾಹೀರಾತು ನೀಡುತ್ತಿದ್ದಾರೆ. ಯಡಿಯೂರಪ್ಪ ಜೈಲಿಗೆ ಹೋಗಿದ್ದನ್ನ ಜಾಹೀರಾತು ನೀಡಲಿ, ಬಿಜೆಪಿ ಸರ್ಕಾರದಲ್ಲಿ ಮೂವರು ಸಿಎಂ ಆಗಿದ್ದ ಬಗ್ಗೆ ಜಾಹೀರಾತು ನೀಡಲಿ, ಸದನದ ಒಳಗಡೆ ಬ್ಲೂ ಫಿಲ್ಮ್ ನೋಡಿದ್ದ ಬಗ್ಗೆ ಜಾಹೀರಾತು ನೀಡಲಿ,  ಪೆಟ್ರೋಲ್, ಡಿಸೇಲ್ , ಬೆಲೆ ಏರಿಕೆ ಬಗ್ಗೆ ಜಾಹೀರಾತು ನೀಡಲಿ, ಕೇಂದ್ರ ಸರ್ಕಾರ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕಿಲ್ಲ ಎಂದು ಜಾಹೀರಾತು ನೀಡಲಿ ಎಂದು ಹರಿಹೈದರಲ್ಲದೆ, ಬಿಜೆಪಿ ಮಾಧ್ಯಮಗಳ ಸುಳ್ಳು ಜಾಹೀರಾತು ನೀಡಿರುವ ಬಗ್ಗೆ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ತಿಳಿಸಿದರು.

 

Trending News