ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಯಶವಂತಪುರ ಬಿಜೆಪಿ ಅಭ್ಯರ್ಥಿ, ನಟ ಜಗ್ಗೇಶ್ ಅಭಿನಯದ ಸಿನಿಮಾಗಳು ಮತ್ತು ರಿಯಾಲಿಟಿ ಶೋಗಳನ್ನು ನಿರ್ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮನವಿ ಸಲ್ಲಿಸಿದೆ.


COMMERCIAL BREAK
SCROLL TO CONTINUE READING

ಯಶವಂತಪುರ ಕಾಂಗ್ರೆಸ್ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಈ ಸಂಬಂಧ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದು, ನಟ ಆಗಿರುವ ಜಗ್ಗೇಶ್ ಯಶವಂತಪುರ ವಿಧನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಖಾಸಗಿ ಚಾನೆಲ್ ಗಳು ಹಾಗೂ ಕೇಬಲ್ ನೆಟ್ ವರ್ಕ್ ಗಳು ಅವರ ಸಿನಿಮಾ ಹಾಗೂ ರಿಯಾಲಿಟಿ ಶೋಗಳನ್ನು ಪ್ರಸಾರ ಮಾಡುತ್ತಿದೆ. ಇದು ನೀತಿ ಸಂಹಿತೆ ಉಲ್ಲಂಘನೆ ಮಾಡಿದಂತಾಗುತ್ತದೆ. ಹಾಗಾಗಿ ಅವುಗಳು ಮತದಾರರ ಮೇಲೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪ್ರಭಾವ ಬಿರುವುದರಿಂದ ಆ ಕಾರ್ಯಕ್ರಮಗಳನ್ನು ನಿರ್ಬಂಧಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.