ನವದೆಹಲಿ: ಕರ್ನಾಟಕ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಹಿರಿಯ ವಕೀಲ ರಾಮ್ ಜೇಠ್ಮಲಾನಿ  ಸುಪ್ರಿಂಕೋರ್ಟ್ ಗೆ ಅರ್ಜೀ ಸಲ್ಲಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಕರ್ನಾಟಕದ ರಾಜ್ಯಪಾಲರು ಬಿಜೆಪಿ ಸರ್ಕಾರ ರಚಿಸಲು ಆಹ್ವಾನ ನೀಡಿರುವುದನ್ನು ಪ್ರಶ್ನಿಸಿ ಇಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜೀ ಸಲ್ಲಿಸಿದ್ದಾರೆ.ಇದಕ್ಕೆ ಪ್ರತಿಕ್ರಯಿಸಿದ ಜೇಠ್ಮಲಾನಿ ತಾವು ಯಾವುದೇ ಪಕ್ಷದ ಪರವಾಗಿ ವಾದ ಮಾಡುತ್ತಿಲ್ಲ ಬದಲಾಗಿ ರಾಜ್ಯಪಾಲರ ಅಸಂವಿಧಾನಿಕ ನಿರ್ಧಾರವನ್ನು ಪ್ರಶ್ನಿಸುತ್ತಿರುವುದು ಎಂದು ತಿಳಿಸಿದ್ದಾರೆ.ಈಗಾಗಲೇ ಸುಪ್ರಿಂ ಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಜೇಠ್ಮಲಾನಿ ಅರ್ಜೆಯನ್ನು ಪರಿಗಣಿಸಿದೆ,ಶುಕ್ರವಾರದಂದು ಇದರ ವಿಚಾರಣೆ ನಡೆಯಲಿದೆ ಎನ್ನಲಾಗಿದೆ.



ಬುಧುವಾರದಂದು ನಾಟಕೀಯ ಬೆಳವಣಿಗೆಯೊಂದರಲ್ಲಿ ರಾಜ್ಯಪಾಲರು ಅಲ್ಪಮತವಿದ್ದರೂ ಸಹಿತ ಸರ್ಕಾರ ರಚಿಸಿಲು ಬಿಜೆಪಿಯ  ಯಡಿಯೂರಪ್ಪನವರಿಗೆ ಆಹ್ವಾನ ನೀಡಿದ್ದ ಹಿನ್ನಲೆಯಲ್ಲಿ ರಾಜ್ಯಪಾಲರ ನಿರ್ಧಾರ ರಾಜಕೀಯ ನಿರ್ಧಾರ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಮತ್ತು  ಜೆಡಿಎಸ್ ಪಕ್ಷಗಳ ಮೈತ್ರಿಯು  ಬಿಜೆಪಿಗಿಂತ ಹೆಚ್ಚಿನ ಸಂಖ್ಯೆಯನ್ನು ಹೊಂದಿದೆ ಆದ್ದರಿಂದ ಅವರು ಸರ್ಕಾರ ರಚನೆಗೆ ಹಕ್ಕು ಮಂಡನೆ ರಾಜ್ಯಪಾಲರ ಬಳಿ ಸಲ್ಲಿಸಿದ್ದರು. ಆದರೆ ಇದನ್ನು ಕಡೆಗಣಿಸಿರುವ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ್ದರು