ಜಿಗ್ನೇಶ್ ಮೇವಾನಿ, ಪ್ರಕಾಶ್ ರೈ ವಿರುದ್ಧ ಎಫ್‍ಐಆರ್
ನಟ ಪ್ರಕಾಶ್ ರೈ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಸೇರಿದಂತೆ 15 ಜನರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.
ಚಿಕ್ಕಮಗಳೂರು: ನಟ ಪ್ರಕಾಶ್ ರೈ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಸೇರಿದಂತೆ 15 ಜನರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.
ಸಂವಿಧಾನ ಉಳಿವಿಗಾಗಿ ಸಮಿತಿಯವರು ನೀತಿ ಸಂಹಿತೆ ಉಲ್ಲಂಘಿಸಿ ಗುರುವಾರ ನಗರದ ಅಂಡೆ ಛತ್ರದ ಬಳಿ ಸಾರ್ವಜನಿಕ ಸಭೆ ನಡೆಸಿದ ಆರೋಪದ ಮೇಲೆ ಗುಜರಾತಿನ ವಡಗಾಂವ್ ಶಾಸಕ ಜಿಗ್ನೇಶ್ ಮೇವಾನಿ, ನಟ ಪ್ರಕಾಶ್ ರೈ ಸೇರಿದಂತೆ 15 ಮಂದಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಚುನಾವಣಾಧಿಕಾರಿಯಿಂದ ಕಾರ್ಯಕ್ರಮಕ್ಕೆ ಅನುಮತಿ ಪಡೆದಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೆ ತೊಂದರೆ ಮಾಡಿದ್ದಾರೆ. ಧ್ವನಿವರ್ಧಕ ಬಳಸಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಕ್ಷಿಪ್ರ ಕಾರ್ಯಾಚರಣೆ ದಳದ ಅಧಿಕಾರಿ ತುಷಾರಮಣಿ ಅವರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ ನಟ ಪ್ರಕಾಶ್ ರೈ ಹಾಗೂ ಜಿಗ್ನೇಶ್ ಮೇವಾನಿ ಸೇರಿದಂತೆ 15 ಕ್ಕೂ ಅಧಿಕ ಮಂದಿಯ ವಿರುದ್ಧ ಐಪಿಸಿ 143, 147, 341, 188, 149 (37,109) ಸೆಕ್ಷನ್ ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ.