ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ಒಂದರಲ್ಲಿ ಮಂಗಳವಾರಿ ದೊರೆತಿದ್ದ 9 ಸಾವಿರಕ್ಕೂ ಅಧಿಕ ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 


COMMERCIAL BREAK
SCROLL TO CONTINUE READING

ರಾಜರಾಜೇಶ್ವರಿನಗರ ಕ್ಷೇತ್ರದ ಚುನಾವಣೆ ಮುಂದೂಡಲು ಜೆಡಿಎಸ್ ಒತ್ತಾಯ


ನೀತಿ ಸಂಹಿತಿ ಉಲ್ಲಂಘನೆ ಆರೋಪದಡಿಯಲ್ಲಿ ಅಪಾರ್ಟ್ಮೆಂಟ್ ಮಾಲಿಕರಾದ ಮಂಜುಳಾ ನಂಜಮರಿ ಸೇರಿದಂತೆ 14 ಮಂದಿ ವಿರುದ್ಧ ಚುನಾವಣಾ ಆಯೋಗ ಎಫ್ಐಆರ್ ದಾಖಲಿಸಿದ್ದು, ಕಾಂಗ್ರೆಸ್ ಶಾಸಕ ಮುನಿರತ್ನ ಅವರನ್ನು ಪ್ರಕರಣದ 14ನೇ ಆರೋಪಿಯನ್ನಾಗಿ ಮಾಡಲಾಗಿದೆ. 


ಅಕ್ರಮವಾಗಿ ಸಂಗ್ರಹಿಸಿದ್ದ 9000ಕ್ಕೂ ಅಧಿಕ ಮತದಾರರ ಗುರುತಿನ ಚೀಟಿ ಪತ್ತೆ


ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ಒಂದರಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಸುಮಾರು 9,746 ಮತದಾರರ ಗುರುತಿನ ಚೀಟಿ ಪತ್ತೆಯಾಗಿದ್ದು, ಚುನಾವಣಾ ಅಧಿಕಾರಿಗಳು ಅದನ್ನು ಮಂಗಳವಾರ ವಶಪಡಿಸಿಕೊಂಡಿದ್ದರು. ಈ ಸಂಬಂಧ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಚುನಾವಣೆ ಮುಂದೂಡಿಕೆಗೆ ಆಗ್ರಹಿಸಿದ್ದವು. ಈ ಮಧ್ಯೆ ಚುನಾವಣಾ ಆಯೋಗ ಈ ಬಗ್ಗೆ ತನಿಖೆ ಆದೇಶಿಸಿತ್ತು.