ಮೇ. 23ರಂದು ಸಂಜೆ 4 ಗಂಟೆಗೆ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣವಚನ
ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ.
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಮೇ.23ರಂದು(ಬುಧವಾರ) ಸಂಜೆ 4 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕಾಗಿ ಭರದ ಸಿದ್ಧತೆ ನಡೆದಿದೆ.
ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನಲೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕಾಗಿ ವಿಧಾನಸೌಧದ ಮುಂಭಾಗದಲ್ಲಿ ಬಹು ಮೆಟ್ಟಿಲುಗಳ ಮೇಲೆ ಬೃಹತ್ ವೇದಿಕೆ ನಿರ್ಮಾಣವಾಗುತ್ತಿದೆ.
ವೇದಿಕೆ ನಿರ್ಮಾಣದಲ್ಲಿ ತೊಡಗಿರುವ ಸಿಬ್ಬಂದಿಗಳು ವಿವಿಐಪಿಗಳಿಗಾಗಿಯೇ ವಿಶೇಷ ಆಸನಗಳ ವ್ಯವಸ್ಥೆ ಮಾಡಿದ್ದರೆ. ವಿವಿಐಪಿಗಳಿಗಾಗಿ 3000 ವಿಶೇಷ ಆಸನಗಳನ್ನು ವ್ಯವಸ್ಥೆ ಮಾಡಲಾಗುತ್ತಿದ್ದು, ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಸಾರ್ವಜನಿಕರಿಗೆ 1ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ.
ಇನ್ನು ಈ ಸಮಾರಂಭಕ್ಕೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳೂ ಸೇರಿದಂತೆ ಬೃಹತ್ ನಾಯಕರ ದಂಡೇ ಆಗಮಿಸಲಿದೆ.