ಪ್ರಮಾನವಚನಕ್ಕೆ ವರುಣನ ಅಡ್ಡಿ
ಕುಮಾರಸ್ವಾಮಿ ಪ್ರಮಾಣವಚನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಬೆಂಗಳೂರು: ವಿಧಾನಸೌಧದ ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು, ಎಚ್.ಡಿ. ಕುಮಾರಸ್ವಾಮಿ ಹಾಗೂ ಡಾ. ಜಿ. ಪರಮೇಶ್ವರ್ ಅವರ ಪ್ರಮಾಣವಚನಕ್ಕೆ ವರುಣ ಅಡ್ಡಿ ಪಡಿಸುವ ಸಾಧ್ಯತೆ ಇದೆ.
ವಿಧಾನಸೌಧ ಸುತ್ತಮುತ್ತ ಸೇರಿದಂತೆ ಬೆಂಗಳೂರು ನಗರದಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ವಿಧಾನಸೌಧಕ್ಕೆ ಬಳಿ ಜಮಾಯಿಸಿದ್ದ ಸಾವಿರಾರು ಜನರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಸಮಾರಂಭಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ಅಭಿಮಾನಿಗಳು, ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಮಳೆಯಲ್ಲೇ ಕುಮಾರಸ್ವಾಮಿಗೆ ಜೈಕಾರ ಹಾಕುತ್ತಿದ್ದು, ಮಳೆಯ ನದುವೆಯೂ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.
ಹಲವರು ಕುರ್ಚಿಗಳು, ಕಟೌಟ್ ಬ್ಯಾನರ್‌ಗಳನ್ನೇ ಕೊಡೆಗಳನ್ನಾಗಿಸಿಕೊಂಡು ರಕ್ಷಣೆ ಪಡೆದರೆ, ಇನ್ನೂ ಕೆಲವರು ಮಳೆ ಸುರಿಯುತ್ತಿದ್ದಂತೆ ದಿಕ್ಕಾಪಾಲಗಿ ಓಡಿದರು.