ಯಾವುದನ್ನೂ ಸ್ವೀಕರಿಸಲು ಅಥವಾ ತಿರಸ್ಕರಿಸಲು ಸಿದ್ಧವಾಗಿಲ್ಲ: ದೇವೇಗೌಡ
ಸದ್ಯದ ಪರಿಸ್ಥಿತಿಯಲ್ಲಿ ತಾವು ಯಾವುದನ್ನೂ ಸ್ವೀಕರಿಸಲು ಅಥವಾ ತಿರಸ್ಕರಿಸಲು ಸಿದ್ಧರಾಗಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಬೆಂಗಳೂರು : ಸದ್ಯದ ಪರಿಸ್ಥಿತಿಯಲ್ಲಿ ತಾವು ಯಾವುದನ್ನೂ ಸ್ವೀಕರಿಸಲು ಅಥವಾ ತಿರಸ್ಕರಿಸಲು ಸಿದ್ಧರಾಗಿಲ್ಲ, ಮೇ 15ರವರೆಗೆ ತಾಳ್ಮೆಯಿಂದಿರಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳು ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಲಿದ್ದು, ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ ಎಂದು ಬಿಂಬಿಸಿರುವ ಹಿನ್ನೆಲೆಯಲ್ಲಿ ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ದೇವೇಗೌಡರು, "ನಾನು ಯಾವುದನ್ನೂ ಸ್ವೀಕರಿಸಲು ಅಥವಾ ತಿರಸ್ಕರಿಸಲು ಸಿದ್ಧವಿಲ್ಲ. ನಿಜಾಂಶ ಅರಿಯಲು ಮೇ 15ರವರೆಗೆ ಕಾಯೋಣ" ಎಂದಿದ್ದಾರೆ.
ಶನಿವಾರ(ಮೇ 12) ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ದೇವೇಗೌಡರು, ರಾಜ್ಯದಲ್ಲಿ ಸರ್ಕಾರ ರಚನೆ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದರು.