ಗಾಂಧಿ ಕುಟುಂಬಕ್ಕೆ ನನ್ನ ಗೌರವ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ- ಹೆಚ್ ಡಿಕೆ
ಪ್ರಮಾಣವಚನ ಸಂದರ್ಭದಲ್ಲಿ ಇಬ್ಬರೂ ಇರುವಂತೆ ನಾನು ಅವರಿಗೆ ಆಹ್ವಾನ ನೀಡಿದ್ದೇನೆ- ಹೆಚ್.ಡಿ. ಕುಮಾರಸ್ವಾಮಿ
ನವದೆಹಲಿ: ಮೇ 23 ರಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ದೆಹಲಿಯಲ್ಲಿಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಮಾಡಿ ಶಪಥ-ಸಮಾರಂಭಕ್ಕೆ ಆಹ್ವಾನಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಡಿಕೆ, ಗಾಂಧಿ ಕುಟುಂಬಕ್ಕೆ ನನ್ನ ಗೌರವ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ. ಪ್ರಮಾಣವಚನ ಸಮಾರಂಭದಲ್ಲಿ ಇಬ್ಬರೂ ಭಾಗವಹಿಸಿವಂತೆ ಅವರಿಗೆ ಆಹ್ವಾನ ನೀಡಿದ್ದೇನೆ. ಇಬ್ಬರೂ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.