ಅಮಿತ್ ಷಾ-ಕುಮಾರಸ್ವಾಮಿ ವಿಮಾನದಲ್ಲಿ ಪ್ರಯಾಣ; ದಾಖಲೆ ಬಿಡುಗಡೆ ಮಾಡ್ತೀನಿ ಎಂದ ಸಿಎಂ

ಅಮಿತ್ ಷಾ ಮತ್ತು ಕುಮಾರಸ್ವಾಮಿ ಒಟ್ಟಿಗೆ ದೆಹಲಿಗೆ ವಿಮಾನದಲ್ಲಿ ಪ್ರಯಾಣಿಸಿದ್ದು, ಈ ಬಗ್ಗೆ ತಮ್ಮ ಬಳಿ ದಾಖಲೆ ಇರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

Last Updated : Apr 29, 2018, 02:45 PM IST
ಅಮಿತ್ ಷಾ-ಕುಮಾರಸ್ವಾಮಿ ವಿಮಾನದಲ್ಲಿ ಪ್ರಯಾಣ; ದಾಖಲೆ ಬಿಡುಗಡೆ ಮಾಡ್ತೀನಿ ಎಂದ ಸಿಎಂ title=

ಬೆಳಗಾವಿ: ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಅಮಿತ್ ಷಾ ಮತ್ತು ಕುಮಾರಸ್ವಾಮಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಅವರಿಬ್ಬರೂ ಒಟ್ಟಿಗೆ ದೆಹಲಿಗೆ ವಿಮಾನದಲ್ಲಿ ಪ್ರಯಾಣಿಸಿದ್ದು, ಈ ಬಗ್ಗೆ ತಮ್ಮ ಬಳಿ ದಾಖಲೆ ಇರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜೆಡಿಎಸ್ ಬಿಜೆಪಿಯ ಬಿ ಟೀಂ. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮತ್ತು ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಷಾ ಇಬ್ಬರೂ ಒಟ್ಟಿಗೆ ವಿಮನದಾಲ್ಲಿ ತೆರಳಿದ್ದಾರೆ. ಅದಕ್ಕೆ ದಾಖಲೆ ನನ್ನ ಬಳಿ ಇದೆ. ಬೇಕಿದ್ದರೆ ಆ ಫೋಟೋ ಬಿಡುಗಡೆ ಮಾಡಬಹುದು. ಆದರೆ ಸಮಯ ಬಂದಾಗ ಬಿಡುಗಡೆ ಮಾಡ್ತೀನಿ" ಎಂದು ಸಿದ್ದರಾಮಯ್ಯ ಹೇಳಿದರು. 

ಮುಂದುವರೆದು, ಅಮಿತ್‌ ಶಾ ಅವರ ಮಾತಿಗೆ ಬಿಜೆಪಿಯಲ್ಲಿ ಬೆಲೆಯಿಲ್ಲ. ಇನ್ನು ಯಡಿಯೂರಪ್ಪ ಅವರಿಗೆ ವಯಸ್ಸಾದರೂ ಯಾವ ರೀತಿ ಮಾತನಾಡಬೇಕೆಂಬ ಜ್ಞಾನ ಇಲ್ಲ. ನನ್ನ ವಿರುದ್ಧ ಏಕವಚನದಲ್ಲಿ ಮಾತನಾಡುತ್ತಾರೆ. ಅವರು ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ನನ್ನನ್ನು ಜೈಲಿಗೆ ಕಳುಹಿಸುವುದಾಗಿ ಹೇಳಿದ್ದಾರೆ. ನನ್ನ ವಿರುದ್ಧ ದಾಖಲೆಗಳಿದ್ದರೆ ಎಸಿಬಿಗೋ, ನ್ಯಾಯಲಯಕ್ಕೋ, ಲೋಕಾಯುಕ್ತಕ್ಕೋ ದೂರು ನೀಡಲಿ' ಎಂದು ಸಿದ್ಧರಾಮಯ್ಯ ಸವಾಲು ಹಾಕಿದರು. 

Trending News