ಕಲ್ಬುರ್ಗಿ: ಇದೇ ಮೇ 17 ರಂದು ತಾವು ಕರ್ನಾಟಕದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುವುದು ಸೂರ್ಯ ಚಂದ್ರರು ಇರೋದು ಎಷ್ಟು ಸತ್ಯವೂ ಅಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ.


COMMERCIAL BREAK
SCROLL TO CONTINUE READING

ಆಳಂದ ಪಟ್ಟಣದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಳೆದ 5 ವರ್ಷಗಳಿಂದ ರಾಜ್ಯದಲ್ಲಿ ಭ್ರಷ್ಟಾಚಾರ, ದೌರ್ಜನ್ಯ, ಹಗಲು ದರೋಡೆ ಮಾಡಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇನ್ನು ಮೂರ್ನಾಲ್ಕು ದಿನಗಳಲ್ಲಿ ಮನೆಗೆ ಹೋಗುವುದು. ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದೂ ನಿಶ್ಚಿತ" ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. 


ಮುಂದುವರೆದು ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೂಡಲೇ ರಾಷ್ಟ್ರೀಕೃತ ಬ್ಯಾಂಕ್'ನಲ್ಲಿರುವ ರೈತರ ಸಾಲ ರರು. 1 ಲಕ್ಷದವರೆಗೆ ಮನ್ನಾ ಮಾಡುವುದಾಗಿ ಹೇಳಿದ ಯಡಿಯೂರಪ್ಪ ಅವರು, ಮರಾಠ ಸಮಾಜವನ್ನು 3b ಯಿಂದ 2a ವರ್ಗಕ್ಕೆ ಸೇರಿಸುತ್ತೇನೆ. ಸಂವಿಧಾನವನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.