ಬೆಂಗಳೂರು: ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಲಾಗಿದೆ. ಈಗ ರೈತರ ಸಾಲ ಮನ್ನಾ ಮಾಡಲು ಯಡಿಯೂರಪ್ಪ ಅವರ ಹತ್ತಿರ ನೋಟು ಪ್ರಿಂಟಿಂಗ್ ಮೆಷೀನ್ ಬಂತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ಬಿಜೆಪಿ ವಿರುದ್ಧ ತಮ್ಮ ಟ್ವೀಟ್ ಮೂಲಕ ಟೀಕಾ ಪ್ರಹಾರವನ್ನೇ ನಡೆಸಿರುವ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಮಾಡಿ ಎಂದು ಯಡಿಯೂರಪ್ಪನವರನ್ನು ಕೇಳಿದಾಗ 'ನನ್ನಲ್ಲಿ ನೋಟು ಪ್ರಿಂಟ್ ಮಾಡುವ ಮೆಷಿನ್ ಇದೆಯೇನ್ರಿ' ಎಂದು ಸಿಡಿಮಿಡಿಯಾಗಿದ್ದರು. ಈಗೇನಾದ್ರು ನೋಟು ಪ್ರಿಂಟಿಂಗ್ ಮೆಷಿನ್ ಬಂತಾ ಯಡಿಯೂರಪ್ಪನವರೇ? ಎಂದು ವ್ಯಂಗ್ಯ ಮಾಡಿದ್ದಾರೆ.


ಬಿಜೆಪಿ ಪ್ರಣಾಳಿಕೆ ರಿಲೀಸ್; ರೈತರ ಸಾಲ ಮನ್ನಾ, ಮಹಿಳೆಯರಿಗೆ ಸ್ಮಾರ್ಟ್ ಪೋನ್


ಇಂದು ಬೆಳಿಗ್ಗೆ ಬಿಜೆಪಿ ಬಿಡುಗಡೆ ಮಾಡಿದ ಚುನಾವಣಾ ಪ್ರಣಾಳಿಕೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ ನ 1 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ, ಬಿಪಿಎಲ್‌ ಕುಟುಂಬದ ಮಹಿಳೆಯರಿಗೆ ಉಚಿತ ಸ್ಮಾರ್ಟ್‌ ಫೋನ್‌, ಉಚಿತ ಸ್ಯಾನಿಟರಿ ನ್ಯಾಪ್ಕಿನ್, ನೇಕಾರರ 1 ಲಕ್ಷ ರೂ. ಸಾಲ ಮನ್ನಾ, 1 ಲಕ್ಷ ರೂ.ನಿಂದ 2 ಲಕ್ಷ ರೂ.ವರಗೆ ಭಾಗ್ಯಲಕ್ಷ್ಮೀ ಯೋಜನೆ ಹಣ ಹೆಚ್ಚಳ ಸೇರಿದಂತೆ ಮೊದಲಾದ ಅಂಶಗಳನ್ನು ಸೇರಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬಿಜೆಪಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಯೋಜನೆಗಳ ನಕಲು ಎಂದು ಅಣಕಿಸಿದ್ದಾರೆ.