ಶಿವಮೊಗ್ಗ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಅನುಮತಿ ಪಡೆದ ನಂತರವೇ ಮಾಜಿ ಸಚಿವ ಜನಾರ್ಧನ ರೆಡ್ಡಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಳ್ಳಾರಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಇತರ ಪ್ರದೇಶಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಜನಾರ್ಧನರೆಡ್ಡಿ ಸಹಕಾರ ಪಡೆಯುತ್ತಿದ್ದೇವೆ. ಇದಕ್ಕೆ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅನುಮತಿ ಕೂಡ ಇದೆ ಎಂದು ಹೇಳಿದ್ದಾರೆ.
ಮುಂದುವರೆದು ಮಾತನಾಡಿದ ಅವರು, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ಕೇವಲ ಊಹಾಪೋಹ. ಯಾವುದೇ ಕಾರಣಕ್ಕೂ ನಾವು ಅವರ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯಲಿದೆ. ಯಾವ ಪಕ್ಷಗಳ ಸಹಕಾರವೂ ಬೇಕಿಲ್ಲ ಎಂದು ಯಡಿಯೂರಪ್ಪ ಹೇಳಿದರು.