ಜೂನ್ 11 ರಂದು ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆ

ಮೇ 18 ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಮೇ 25 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 

Last Updated : May 18, 2018, 07:44 AM IST
ಜೂನ್ 11 ರಂದು ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆ title=

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಿ. ಎನ್. ವಿಜಯಕುಮಾರ್ ನಿಧನದಿಂದಾಗಿ ಮುಂದೂಡಿಕೆಯಾಗಿದ್ದ  ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಜೂನ್ 11 ಕ್ಕೆ ನಿಗದಿಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 

ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಜೂನ್ 11ರಂದು ಮತದಾನ ನಡೆಯಲಿದ್ದು, ಜೂನ್‌ 13ರಂದು ಮತ ಎಣಿಕೆ ನಡೆಯಲಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ. ಮೇ. 17ರಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಮೇ.18 ನಾಮಪತ್ರ ಪ್ರಕ್ರಿಯೆ ಶುರುವಾಗಲಿದ್ದು  ಮೇ.25 ನಾಮಪತ್ರ ಸಲ್ಲಿಸಲು ಕೊನೆಯ ದಿವಾಗಿದೆ. ಮೇ 26ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್‌ ಪಡೆಯಲು ಮೇ 28 ಕೊನೇ ದಿನವಾಗಿದೆ. 

 

Trending News