ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪ್ರಚಾರಕ್ಕಿಳಿದಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿಯಲ್ಲಿ  ಜೆಡಿಎಸ್‌ ಕಾಯಕರ್ತರು ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಸಿಎಂ ಸಿದ್ದರಾಮಯ್ಯ ಪರ ನಟ ದರ್ಶನ್ ಪ್ರಚಾರ ಮಾಡುವುದನ್ನು ಖಂಡಿಸಿದ ಜೆಡಿಎಸ್ ಕಾರ್ಯಕರ್ತರು, ಕಾವೇರಿ ಪರ ಹೋರಾಟ ಯಾಕೆ ಮಾಡಲಿಲ್ಲ, ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಬಾರದು ಎಂದು ದರ್ಶನ್ ವಿರುದ್ಧ ಧಿಕ್ಕಾರ ಕೂಗುತ್ತಾ ಪ್ರತಿಭಟನೆ ನಡೆಸಿದರು. 


ನಂತರ ಜೆಡಿಎಸ್‌ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾದಾಗ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು, ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿಯನ್ನು ತಹಬದಿಗೆ ತರಲಾಯಿತು.


ಇದೆಲ್ಲದರ ನಡುವೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮ ಅಬ್ಬರದ ಪ್ರಚಾರ ನಡೆಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಮೇ. 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿದ್ದಾರೆ. ತಮ್ಮ ಅತ್ಯಮೂಲ್ಯವಾದ ಮತವನ್ನು ಅವರಿಗೆ ನೀಡಿ, ಅವರನ್ನು ಬಹುಮತದೊಂದಿಗೆ ಜಯಶೀಲರನ್ನಾಗಿ ಮಾಡಿ ಎಂದು ಜನತೆಯ ಮತಯಾಚಿಸಿದರು.