ಸಿಎಂ ಆಗಿ ಕುಮಾರಸ್ವಾಮಿ ಪ್ರಮಾಣ ವಚನ: ವಿಧಾನಸೌಧದ ಸುತ್ತ ಬಿಗಿ ಭದ್ರತೆ

ವಿಧಾನಸೌದ ಸುತ್ತಮುತ್ತ 2,500 ಪೊಲೀಸರ ನಿಯೋಜನೆ.  

Last Updated : May 23, 2018, 12:43 PM IST
ಸಿಎಂ ಆಗಿ ಕುಮಾರಸ್ವಾಮಿ ಪ್ರಮಾಣ ವಚನ: ವಿಧಾನಸೌಧದ ಸುತ್ತ ಬಿಗಿ ಭದ್ರತೆ  title=

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗುತ್ತಿದ್ದು, ಇಂದು ಸಂಜೆ 04:00ಕ್ಕೆ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಈಗಾಗಲೇ ಸಕಲ ಸಿದ್ಧತೆ ನಡೆದಿದೆ. 

ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನಲೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕಾಗಿ ವಿಧಾನಸೌಧದ ಮುಂಭಾಗದಲ್ಲಿ ಬಹು ಮೆಟ್ಟಿಲುಗಳ ಮೇಲೆ ಬೃಹತ್ ವೇದಿಕೆ ನಿರ್ಮಾಣವಾಗಿದೆ. ಕಾರ್ಯಕ್ರಮದಲ್ಲಿ ವಿವಿಐಪಿಗಳಿಗಾಗಿ ವಿಶೇಷ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳಿಗಾಗಿ 3000 ವಿಶೇಷ ಆಸನಗಳನ್ನು ವ್ಯವಸ್ಥೆ ಮಾಡಲಾಗಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಸಾರ್ವಜನಿಕರಿಗೆ 1ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ವಿಧಾನಸೌಧದ ಸುತ್ತಮುತ್ತ 2,500 ಪೊಲೀಸರ ನಿಯೋಜನೆ
ವಿಧಾನಸೌದ ಸುತ್ತಮುತ್ತ ಭದ್ರತೆಗಾಗಿ 35 ಕೆಎಸ್ ಆರ್ ಪಿ, 50 ಸಿ.ಆರ್ ತುಕಡಿ,100 ಇನ್ಸ್‌ಪೆಕ್ಟರ್, 50 ಎಸಿಪಿ ಸೇರಿ 2,500 ಪೊಲೀಸರ ನಿಯೋಜನೆ ಮಾಡಲಾಗಿದೆ. 

ಟ್ರಾಫಿಕ್ ಸಮಸ್ಯೆ ಆಗದಂತೆ ನೋಡಿಕೊಳ್ಳಲು 3000 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ಇಂದು ದೇಶದ ಹಲವು ಗಣ್ಯ ವ್ಯಕ್ತಿಗಳು ರಾಜ್ಯಕ್ಕೆ ಆಗಮಿಸುತ್ತಿರುವುದರಿಂದ ಅವರಿಗೆ ಬೇಕಾದಂತಹ ವಾಹನದ ವ್ಯವಸ್ಥೆಯನ್ನು ಮಾಡಲಾಗಿದೆ. 

ನಗರಕ್ಕೆ ಬರುವ 2000 ಬಸ್ ಗಳಗೆ ಪ್ಯಾಲೇಸ್ ಗ್ರೌಂಡ್ ನಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಕಂಠೀರವ ಸ್ಟೇಡಿಯಂ, ಯುಬಿ ಸಿಟಿಯಲ್ಲಿಯೂ ವಾಹನಗಳ‌ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳು ಹಾಗೂ ಪಾಸ್ ಹೊಂದಿದವರಿಗೆ ವಿಧಾನಸೌಧದ ಒಳಗಡೆಯೇ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಹೇಳಿಕೆ ನೀಡಿದರು.

Trending News