ಕೋಲಾರ: ಕೋಲಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರವಷ್ಟೇ ನಾಮಪತ್ರ ಸಲ್ಲಿಸಿರುವ ಓಂಶಕ್ತಿ ಚಲಪತಿ ಅವರ ಕಾರಿಗೆ ಇಂದು ಬೆಳಗಿನ ಜಾವ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.


COMMERCIAL BREAK
SCROLL TO CONTINUE READING

ಕೋಲಾರ ನಗರದ ಕಠಾರಿ ಪಾಳ್ಯ ಬಡಾವಣೆಯಲ್ಲಿ ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇನ್ನೋವ ಕಾರಿಗೆ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಪಕ್ಕದಲ್ಲೇ ಇದ್ದ ಓಮ್ನಿ ಕಾರು ಕೂಡ ಸುಟ್ಟು ಭಸ್ಮವಾಗಿದೆ.


ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಓಂಶಕ್ತಿ ಚಲಪತಿ ಜನಪ್ರಿಯತೆ ಸಹಿಸಲಾಗದೆ ವಿರೋಧಿಗಳು ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.