ಮೋದಿ ಮಾತುಗಳು ಕಾಮಿಡಿ ಶೋ ಇದ್ದಂತೆ: ಸಿದ್ದರಾಮಯ್ಯ

ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ಮೋದಿ ಅವರ ವೈಯಕ್ತಿಕ ಟೀಕೆಗಳು ಕಾಮಿಡಿ ಶೋ ಇದ್ದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Last Updated : May 10, 2018, 11:46 AM IST
ಮೋದಿ ಮಾತುಗಳು ಕಾಮಿಡಿ ಶೋ ಇದ್ದಂತೆ: ಸಿದ್ದರಾಮಯ್ಯ  title=

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ಮೋದಿ ಅವರ ವೈಯಕ್ತಿಕ ಟೀಕೆಗಳು ಕಾಮಿಡಿ ಶೋ ಇದ್ದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಚುನಾವಣಾ ಪ್ರಚಾರಕ್ಕೆ ಇಂದು ತೆರೆ ಬೀಳಲಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್ ಅಶೋಕದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತಾನಾಡಿದ ಸಿದ್ದರಾಮಯ್ಯ ಅವರು, ಪ್ರಧಾನಿ ಮೋದಿ ಅವರು  ಚುನಾವಣಾ ಪ್ರಚಾರದಲ್ಲಿ ರಾಷ್ಟ್ರ ಮತ್ತು ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡದೆ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ನನ್ನ ಮೇಲೆ ತೀವ್ರ ವೈಯಕ್ತಿಕ ತೇಜೋವಧೆಯ ಪ್ರಯತ್ನ ಮಾಡಿದ್ದಾರೆ. ಹಾಗಂತ ನಾವು ಅವರ ಮಟ್ಟಕ್ಕೆ ಇಳಿದು ಮಾತನಾಡಿಲ್ಲ. ಇದರಿಂದ ಪಧನಮಂತ್ರಿ ಸ್ಥಾನದ ಘನತೆಗೆ ಧಕ್ಕೆಯಾಗುತ್ತದೆ. ನಾವು ಕೇವಲ ಅವರ ಸರ್ಕಾರದ ವೈಫಲ್ಯಗಳನ್ನು ಎತ್ತಿಹಿಡಿದಿದ್ದೇವೆ. ಆದರೆ ಅವರು ನಮ್ಮ ಮೇಲೆ ಆಧಾರರಹಿತ ಆರೋಪ ಮಾಡಿದ್ದಾರೆ. ಅವರ ಭಾಷಣಗಳನ್ನು ಜನರು ಕಾಮಿಡಿ ಶೋ ಎಂದು ಆಡಿಕೊಳ್ಳುತ್ತಿದ್ದಾರೆ ಎಂದು ಸಿದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ವಿರೋಧಿ ಅಲ್ಲ. ಯಾವುದೇ ಒಂದು ಜಾತಿ ಅಥವಾ ಧರ್ಮದ ಕಾರ್ಯಕ್ರಮಗಳನ್ನು ಮಾತ್ರ ಜಾರಿಗೆ ತಂದಿಲ್ಲ. ಸಮಾಜದ ಎಲ್ಲಾ ವರ್ಗಗಳಿಗೂ ಅನ್ವಯಿಸುವಂತೆ ಸಮಾನ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನಮ್ಮ ಆಡಳಿತ ಮತ್ತು ಕಾರ್ಯಕ್ರಮಗಳನ್ನು ಜನತೆ ಒಪ್ಪಿದ್ದಾರೆ. ನರೇಂದ್ರ ಮೋದಿ, ಅಮಿತ್ ಷಾ ಏನೇ ಹೇಳಲಿ, ಜನರು ಪ್ರಭುದ್ಧ ತಿರ್ಮಾನ ತೆಗೆದುಕೊಳ್ಳುತ್ತಾರೆ. ಆ ಬಗ್ಗೆ ನಮಗೆ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯ ವಿಧಾನಸಭಾ ಚುನಾವಣೆಗೆ ಏರದೆ ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಡೆ ಕ್ಷಣದ ಬಿರುಸಿನ ಪ್ರಚಾರ ಆರಂಭಿಸಿದ್ದು, ಜನರ ಪ್ರಶ್ನೆಗಳಿಗೆ, ಮೋದಿ ಟೀಕೆಗಳಿಗೆ ಪತ್ರಿಕಾಗೋಷ್ಠಿಯಲ್ಲಿ ಪ್ರತ್ಯುತ್ತರ ನೀಡಲು ಯತ್ನಿಸಿದೆ. 

Trending News