ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಆರೋಪದ ಮೇಲೆ ಮೈಸೂರು ವಿಶ್ವವಿದ್ಯಾನಿಲಯದ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. 


COMMERCIAL BREAK
SCROLL TO CONTINUE READING

ಇಲ್ಲಿನ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪ್ರಚಾರ ಮಾಡಿ, ನೀತಿ ಸಂಹಿತಿ ಉಲ್ಲಂಘಿಸಿದ ಆರೋಪದ ಮೇಲೆ ಮೈಸೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರೊ.ಮಹೇಶ್ ಚಂದ್ರ ಗುರು ಮತ್ತು ಕುವೆಂಪು ಕನ್ನಡ ಸಂಸ್ಥೆಯ ಪ್ರೊ.ಅರವಿಂದ ಮಾಲಗತ್ತಿ ಅವರನ್ನು ಅಮಾನತುಗೊಳಿಸಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.


10 ದಿನಗಳ ಹಿಂದೆ ಇವರಿಬ್ಬರೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದಲ್ಲಿ ಈ ಇಬ್ಬರೂ ಪಾಲ್ಗೊಂಡು, ಸಿದ್ದರಾಮಯ್ಯ ಪರ ಮತಯಾಚನೆ ಮಾಡಿದ್ದರು ಎನ್ನಲಾಗಿದೆ.