ಬೆಂಗಳೂರು: ಚುನಾವಣಾ ಗುರುತಿನ ಚೀಟಿ ಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮತದಾನ ಮುಂದೂಡಿದ್ದು, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ 9,564 ಮತದಾರರಿಗೆ ಹೊಸದಾಗಿ ಚುನಾವಣಾ ಗುರುತಿನ ಚೀಟಿ (ಎಪಿಕ್‌ ಕಾರ್ಡ್‌) ವಿತರಿಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಕರ್ನಾಟಕ ಚುನಾವಣಾ ಫಲಿತಾಂಶಗಳು 2018


ವಿಕಾಸಸೌಧದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌, ಮೇ 21ರೊಳಗೆ ಎಲ್ಲ 9,564 ಮತದಾರರಿಗೆ ಎಪಿಕ್‌ ಕಾರ್ಡ್‌ಗಳನ್ನು ವಿತರಿಸುವಂತೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಚುನಾವಣಾ ಗುರುತಿನ ಚೀಟಿ (ಎಪಿಕ್‌ ಕಾರ್ಡ್‌) ಹಂಚಲು 1,000 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಚುನಾವಣಾ ಆಯೋಗದ ಪರಿಷ್ಕೃತ ದಿನಾಂಕದಂತೆ ಮೇ 28ಕ್ಕೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ನಡೆಸಬೇಕಿದೆ ಎಂದು ತಿಳಿಸಿದರು.