ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ದಿವಂಗತ ಬಿ.ಎನ್. ವಿಜಯಕುಮಾರ್ ಅವರ ಸಹೋದರ ಬಿ.ಎನ್. ಪ್ರಹ್ಲಾದ್ ಬಾಬು ಅವರಿಗೆ ಟಿಕೆಟ್ ಬಿಜೆಪಿ ಟಿಕೆಟ್ ನೀಡಿದೆ. ಪ್ರಹ್ಲಾದ್ ಬಾಬು ಅವರಿಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ.


COMMERCIAL BREAK
SCROLL TO CONTINUE READING

ಪ್ರಹ್ಲಾದ್ ಬಾಬು ಆಯ್ಕೆಗೆ ಜಯನಗರ ಕ್ಷೇತ್ರದ ಬಿಜೆಪಿಯ ಹಾಲಿ ಮತ್ತು ಮಾಜಿ ಕಾರ್ಪೊರೇಟರ್‌ಗಳು ವಿರೋಧ ವ್ಯಕ್ತಪಡಿಸಿದ್ದರು. ಸೋಮವಾರ ರಹಸ್ಯ ಸಭೆ ನಡೆಸಿದ್ದ ಪಟ್ಟಾಭಿರಾಮ ನಗರ ವಾರ್ಡ್ ಮಾಜಿ ಕಾರ್ಪೋರೇಟರ್ ಸಿ.ಕೆ.ರಾಮಮೂರ್ತಿ, ಭೈರಸಂದ್ರ ವಾರ್ಡ್ ಕಾರ್ಪೋರೇಟರ್ ಎನ್.ನಾಗರಾಜ್, ಮಾಜಿ ಮೇಯರ್ ಎಸ್.ಕೆ.ನಟರಾಜ್, ಸೋಮಶೇಖರ್, ಗೋವಿಂದನಾಯ್ಡು ಅವರು ಬಹುರಂಗವಾಗಿಯೇ ತಮ್ಮಲ್ಲೇ ಯಾರಿಗಾದರೂ ಜಯನಗರದ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ಆದರೆ ಬಿಜೆಪಿ ಕಾರ್ಪೊರೇಟರ್ ಗಳ ಬೇಡಿಕೆಗೆ ಮನ್ನಣೆ ನೀಡದ ಬಿಜೆಪಿ ಪ್ರಹ್ಲಾದ್ ಬಾಬು ಅವರಿಗೆ ಟಿಕೆಟ್ ನೀಡಿದ್ದು, ಇದು ಬಿಜೆಪಿಯಲ್ಲಿ ಅಸಮಾಧಾನದ ಹೊಗೆಯಾಡಲು ಕಾರಣವಾಗಿದೆ.


ಮೇ 12ರಂದು ನಡೆಯಬೇಕಿದ್ದ ಜಯನಗರ ಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಿ.ಎನ್. ವಿಜಯಕುಮಾರ್ ನಿಧನದಿಂದ ಮುಂದೂಡಲ್ಪಟ್ಟಿತ್ತು. ಜೂನ್ 11ರಂದು ಜಯನಗರ ಚುನಾವಣೆ ನಡೆಯಲಿದ್ದು ಜೂನ್ 16 ರಂದು ಮತ ಎಣಿಕೆ ನಡೆಯಲಿದೆ. ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಪರವಾಗಿ ರಾಮಲಿಂಗಾ ರೆಡ್ಡಿ ಪುತ್ರ ಸೌಮ್ಯ ರೆಡ್ಡಿ ಸ್ಪರ್ಧಿಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಸಹ ಕಣಕ್ಕಿಳಿದಿದ್ದಾರೆ.