ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ರಮೇಶ್ ಕುಮಾರ್ ಹಾಗೂ ಸುರೇಶ್ ಕುಮಾರ್

ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರದಿಂದ ಕೆ. ರಮೇಶ್​ ಕುಮಾರ್​ ಆವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

Last Updated : May 24, 2018, 01:23 PM IST
ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ರಮೇಶ್ ಕುಮಾರ್ ಹಾಗೂ ಸುರೇಶ್ ಕುಮಾರ್ title=
Pic: ANI

ಬೆಂಗಳೂರು: ಮೇ. 25 ರಂದು ಸದನದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ಮತ ಸಾಬೀತು ಪಡಿಸಲಿದ್ದಾರೆ. ಆದರೆ ಅದಕ್ಕೂ ಮೊದಲು ಸದನದಲ್ಲಿ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಇನ್ನು ಈ ಸಂಬಂಧ ಇಂದು ಬೆಳಗ್ಗೆ ವಿಧಾನಸೌಧಕ್ಕೆ ತೆರಳಿ ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಹಾಗೂ ಬಿಜೆಪಿ ಪಕ್ಷದ ನಾಯಕರು ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದ್ದಾರೆ.  

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರದಿಂದ ಕೆ. ರಮೇಶ್​ ಕುಮಾರ್​ ಆಯ್ಕೆ ಮಾಡಲಾಗಿದೆ.  ಇಂದು ಅವರು ಡಿಸಿಎಂ ಡಾ. ಜಿ. ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ​ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಬಿಜೆಪಿಯಿಂದ ರಾಜಾಜಿ ನಗರದ ಶಾಸಕರಾಗಿರುವ ಸುರೇಶಕುಮಾರ್​ ಕೂಡ ನಾಮಪತ್ರ ಸಲ್ಲಿಸಿದ್ದಾರೆ.  

ಈ ಹಿಂದೆ ಸ್ಪೀಕರ್ ಆಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಹಿರಿಯ ಮುತ್ಸದ್ದಿ ರಮೇಶ್ ಕುಮಾರ್ ಅವರು ಮತ್ತೆ ಆಯ್ಕೆ ಆಗುತ್ತಾರೆ ಎನ್ನುವುದು ನನ್ನ ವಿಶ್ವಾಸ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

Trending News