ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ದಾಖಲೆ ಪ್ರಮಾಣದ ಮತದಾನ

2013ರ ವಿಧಾನಸಭಾ ಚುನಾವಣೆಯಲ್ಲಿ ಶೇ. 71ರಷ್ಟು ಮತದಾನ ನಡೆದಿತ್ತು. ಈ ಬಾರಿಯ ಚುನಾವಣೆಯಲ್ಲಿ ಶೇ. 72.13ರಷ್ಟು ಮತದಾನ ನಡೆಸಿದೆ- ಚುನಾವಣಾ ಆಯೋಗ

Last Updated : May 14, 2018, 10:50 AM IST
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ದಾಖಲೆ ಪ್ರಮಾಣದ ಮತದಾನ title=
ಸಂಗ್ರಹ ಚಿತ್ರ

ಬೆಂಗಳೂರು: ಮೇ. 12ರಂದು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಗರಿಷ್ಠ ಪ್ರಮಾಣದ ಮತದಾನವಾಗಿದೆ. ರಾಜ್ಯದಲ್ಲಿ ಇದು ದಾಖಲೆ ಪ್ರಮಾಣದ ಮತದಾನ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್, ಹಾಲಿ ವಿಧಾನಸಭಾ ಚುನಾವಣೆಯಲ್ಲಿ ಶೇ.72.13 ರಷ್ಟು ಮತದಾನ ನಡೆಯವ ಮೂಲಕ ಕರ್ನಾಟಕದಲ್ಲಿ ದಾಖಲೆ ನಿರ್ಮಾಣವಾಗಿದೆ ಎಂದು ತಿಳಿಸಿದರು.

ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿ ದಾಖಲೆಯ ಶೇ.72.36ರಷ್ಟು ಮತದಾನವಾಗಿದೆ. ಹೊಸಕೋಟೆಯಲ್ಲಿ ಅತಿ ಹೆಚ್ಚು ಶೇ.89ರಷ್ಟು, ದಾಸರಹಳ್ಳಿ ಕ್ಷೇತ್ರದಲ್ಲಿ ಅತೀ ಕಡಿಮೆ ಶೇ.47ರಷ್ಟು ಮತದಾನ ನಡೆದಿದೆ. ಮತದಾನದ ಪ್ರಮಾಣ 2013ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಶೇಕಡ 3.15ರಷ್ಟು ಏರಿಕೆಯಾಗಿದೆ. ಇದು ದೊಡ್ಡ ಸಾಧನೆಯಾಗಿದೆ ಎಂದು ಸಂಜೀವ್‌ ಕುಮಾರ್‌ ಹರ್ಷ ವ್ಯಕ್ತಪಡಿಸಿದರು. 

Trending News