close

News WrapGet Handpicked Stories from our editors directly to your mailbox

ಇಂದು ಶ್ರೀರಾಮುಲು ಪರ ನಟ ಯಶ್ ಪ್ರಚಾರ

ಹಲವು ಅಭ್ಯರ್ಥಿಗಳ ಪರ ಪ್ರಚಾರ ಆರಂಭಿಸಿರುವ ರಾಕಿಂಗ್ ಸ್ಟಾರ್ ಯಶ್ ಇಂದು ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ.

Updated: May 4, 2018 , 10:47 AM IST
ಇಂದು ಶ್ರೀರಾಮುಲು ಪರ ನಟ ಯಶ್ ಪ್ರಚಾರ

ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಚುನಾವಣೆ ಇದೇ ಮೇ 12ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಹಲವು ಅಭ್ಯರ್ಥಿಗಳ ಪರ ಪ್ರಚಾರ ಆರಂಭಿಸಿರುವ ರಾಕಿಂಗ್ ಸ್ಟಾರ್ ಯಶ್ ಇಂದು ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ.

ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರ ಇಂದು ಮತಯಾಚನೆ ಮಾಡಲಿರುವ ಯಶ್, ರೋಡ್ ಶೋ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ನಾಯಕನಹಟ್ಟಿಯಿಂದ ಪ್ರಚಾರ ಆರಂಭಿಸಲಿರುವ ಯಶ್, ಕೊಂಡ್ಲಹಳ್ಳಿ, ಮೊಳಕಾಲ್ಮೂರು ಹಾಗು ರಾಂಪುರದಲ್ಲಿ  ಶ್ರೀರಾಮುಲು ಪರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. 

ಯಾವುದೇ ರಾಜಕೀಯ ಪಕ್ಷಗಳ ಪ್ರಚಾರ ಮಾಡುವುದಿಲ್ಲ, ಸ್ನೇಹಕ್ಕಾಗಿ, ಉತ್ತಮ ಕೆಲಸ ಮಾಡುವ ವ್ಯಕ್ತಿಗಳ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ಯಶ್ ಹೇಳಿದ್ದರು. ಅದರಂತೆ ಇಂದು ಮೊಣಕಾಲ್ಮೂರು ಕ್ಷೇತ್ರದ ಅಭ್ಯರ್ಥಿ ಶ್ರೀರಾಮುಲು ಪರ ಪ್ರಚಾರಕ್ಕೆ ಯಶ್ ಮುಂದಾಗಿದ್ದಾರೆ.