ಬೆಂಗಳೂರು: ಇತ್ತೀಚಿಗಷ್ಟೇ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ನಾನು ಕನ್ನಡಿಗ ಎಂದು ಹೇಳಿಕೊಂಡಿದ್ದರು. ತಮ್ಮನ್ನು ಕನ್ನಡಿಗ ಎಂದು ಘೋಷಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಕನ್ನಡಿಗನಾಗುವುದೆಂದರೆ.... ಜತೆಗೆ, ನಾಡಭಾಷೆ, ನಾಡಗೀತೆ, ನಾಡಧ್ವಜವನ್ನು ಒಪ್ಪಿಕೊಳ್ಳುವುದು. ಬಲತ್ಕಾರದ ಹಿಂದಿ ಹೇರಿಕೆಯನ್ನು ಕೈಬಿಡುವುದು. ನೆಲ,ಜಲ,ಭಾಷೆಯ ರಕ್ಷಣೆಗೆ  ಬದ್ದವಾಗಿರುವುದು. ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ. ಈ ನೆಲದ ಶರಣರು, ಸಂತರು, ದಾಸರು, ಸೂಫಿಗಳು ಹುಟ್ಟುಹಾಕಿದ ಸೌಹಾರ್ದ ಪರಂಪರೆಯನ್ನು‌ ಗೌರವಿಸುವುದು.



COMMERCIAL BREAK
SCROLL TO CONTINUE READING

ಕನ್ನಡಿಗನಾಗುವುದೆಂದರೆ....
ನಾಡಭಾಷೆ, ನಾಡಗೀತೆ, ನಾಡಧ್ವಜವನ್ನು ಒಪ್ಪಿಕೊಳ್ಳುವುದು. ಕರ್ನಾಟಕದ ನಾಡಧ್ವಜಕ್ಕೆ ಅಂಗೀಕಾರ‌ ನೀಡಿ, ನಿಜವಾದ ಕನ್ನಡಿಗರಾಗುವಿರಾ? ಎಂಬ ಹಲವು ಪ್ರಶ್ನೆಗಳನ್ನೂ ಕೇಳಿದ್ದಾರೆ.



ಕನ್ನಡಿಗನಾಗುವುದೆಂದರೆ....
ಬಲತ್ಕಾರದ ಹಿಂದಿ ಹೇರಿಕೆಯನ್ನು ಕೈಬಿಡುವುದು, ಕನ್ನಡಕ್ಕೆ ಪ್ರಾಮುಖ್ಯ ಕೊಡುವುದು.ಕನ್ನಡಿಗರಾಗಲು ಸಿದ್ದ ಇದ್ದೀರಾ?


ಕನ್ನಡಿಗನಾಗುವುದೆಂದರೆ....
ನೆಲ,ಜಲ,ಭಾಷೆಯ ರಕ್ಷಣೆಗೆ  ಬದ್ದವಾಗಿರುವುದು. ಮಹದಾಯಿ ನೀರು ಹಂಚಿಕೆ ವಿವಾದ ಬಗೆಹರಿಸಲು ಮೂರು ರಾಜ್ಯಗಳ ಸಭೆ ಕರೆದು ಕನ್ನಡಿಗರಾಗುವಿರಾ?



ಕನ್ನಡಿಗನಾಗುವುದೆಂದರೆ....
ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ. ರಾಷ್ಟೀಕೃತ ಬ್ಯಾಂಕುಗಳ ಪ್ರವೇಶ‌ ಪರೀಕ್ಷೆಯನ್ನು‌ ಕನ್ನಡಿಗರಿಗೆ ಕನ್ನಡದಲ್ಲಿ ಬರೆಯಲು ಅವಕಾಶ‌ ನೀಡಿ‌ ಕನ್ನಡಿಗರಾಗುವಿರಾ?



ಕನ್ನಡಿಗನಾಗುವುದೆಂದರೆ....
ಈ ನೆಲದ ಶರಣರು, ಸಂತರು, ದಾಸರು, ಸೂಫಿಗಳು ಹುಟ್ಟುಹಾಕಿದ ಸೌಹಾರ್ದ ಪರಂಪರೆಯನ್ನು‌ ಗೌರವಿಸುವುದು. ಒಬ್ಬನೇ ಒಬ್ಬ‌ ಮುಸ್ಲಿಮ್,‌ ಕ್ರಿಶ್ಚಿಯನ್‌ಗೆ ಚುನಾವಣೆಯಲ್ಲಿ ಟಿಕೆಟ್ ನೀಡದೆ ನಿಮಗೆ‌ ನಿಜವಾದ ಕನ್ನಡಿಗರಾಗಲು ಸಾಧ್ಯವೇ? ಎಂದು  '#AnswerMadiModi' ಎಂಬ ಹ್ಯಾಷ್ ಟ್ಯಾಗ್ ನಡಿಯಲ್ಲಿ ಟ್ವೀಟ್ ಮೂಲಕ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.