ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲುವು ಸಾಧಿಸುವ ವಿಶ್ವಾಸವಿಲ್ಲ. ಹಾಗಾಗಿ ಅವರು ಬಾದಾಮಿಯಿಂದಲೂ ಕಣಕ್ಕಿಳಿದಿದ್ದಾರೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ನಾನು 100% ಗೆಲ್ಲುತ್ತೇನೆ, ಸಿದ್ದರಾಮಯ್ಯ ವಿಜಯದ ಬಗ್ಗೆ ವಿಶ್ವಾಸ ಹೊಂದಿಲ್ಲ, ಅದಕ್ಕಾಗಿಯೇ ಅವರು ಬಾದಾಮಿಯಿಂದ ಸ್ಪರ್ಧಿಸುತ್ತಿದ್ದಾರೆ. ಮುಖ್ಯಮಂತ್ರಿಯಾಗಿ ಅವರು ಈ ಕ್ಷೇತ್ರವನ್ನು ನಿರ್ಲಕ್ಷಿಸಿದರು. ಕಾಂಗ್ರೆಸ್ ಕೂಡ ವಿಫಲಗೊಳ್ಳುತ್ತದೆ, ಪ್ರತಿಯೊಬ್ಬರೂ ಜೆಡಿಎಸ್ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ನೋಡಬೇಕು ಎಂದು ಬಯಸುತ್ತಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ಐ ನೊಂದಿಗೆ ಮಾತನಾಡಿದ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.